ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2023- 2024 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಇಂದಿನಿಂದ ಆರಂಭವಾಗಲಿದೆ.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಖಜಾನೆಗಳಿಂದ ಪ್ರಶ್ನೆಪತ್ರಿಕೆ ಸ್ವೀಕರಿಸಿ, ಅವುಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕ ನೇಮಿಸಲಾಗುವುದು. ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಸೇರಿ ವಿದ್ಯನ್ಮಾನ ಉಪಕರ ಕಡ್ಡಾಯ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ಗುರುತಿನ ಚೀಟಿ ಕಡ್ಡಾಯವಾಗಿ ಧರಿಸಬೇಕು.
ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ತೋರಿಸಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಇದಲ್ಲದೇ ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗದಲ್ಲಿ ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶ್ರುಶೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಕಲ್ಪಿಸುವುದು, ಮತ್ತಿತರ ಅಗತ್ಯ ಮೂಲ ಸೌಲಭ್ಯವನ್ನು ಒದಗಿಸಲು ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಸಲಹೆ ನೀಡಲಾಗಿದೆ. ಇನ್ನೂ ಮೊದಲೇ ಮಾಹಿತಿ ನೀಡುವಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮಗೆ ವಹಿಸಿರುವ ಕೆಲಸವನ್ನು ವ್ಯವಸ್ಥಿತವಾಗಿ ಮತ್ತು ಗಂಭೀರವಾಗಿ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ವಿಷಯವಾರು ಈ ಕೆಳಗಿನಂತಿದೆ.
ಪರೀಕ್ಷೆ ವಿಷಯಗಳು | ಪರೀಕ್ಷೆ ದಿನಾಂಕ |
ಕನ್ನಡ, ಅರೇಬಿಕ್ | 01-03-2024 |
ಗಣಿತ, ಶಿಕ್ಷಣಶಾಸ್ತ್ರ | 04-03-2024 |
ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ | 05-03-2024 |
ಮಾಹಿತಿ ತಂತ್ರಜ್ಞಾನ, ಹೆಲ್ತ್‌ಕೇರ್, ಬ್ಯೂಟಿ ಅಂಡ್ವೆಲ್‌ನೆಸ್ , ಆಟೋಮೊಬೈಲ್, ರೀಟೈಲ್ | 06-03-2024 |
ಇತಿಹಾಸ / ಭೌತಶಾಸ್ತ್ರ | 07-03-2024 |
ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ | 09-03-2024 |
ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ | 11-03-2024 |
ಇಂಗ್ಲಿಷ್ | 13-03-2024 |
ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ | 15-03-2024 |
ಅರ್ಥಶಾಸ್ತ್ರ | 16-03-2024 |
ಭೂಗೋಳಶಾಸ್ತ್ರ, ಜೀವಶಾಸ್ತ್ರ | 18-03-2024 |
ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ | 20-03-2024 |
ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್ | 21-03-2024 |
ಹಿಂದಿ | 22-03-2024 |