ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯ ಮಾಡಿದ್ದು, ಭಕ್ತರು ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಮನವಿ ಮಾಡಿಕೊಂಡಿದೆ ಅಡಳಿತ ಮಂಡಳಿ.
ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಅಂತ ಅಡಳಿತ ಮಂಡಳಿ ತಿಳಿಸಿದೆ.ಕೆಲವು ದಿನಗಳ ಹಿಂದೆ ಶೃಂಗೇರಿಯಲ್ಲಿ ಕೂಡ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದ್ದನ್ನು ಸ್ಮರಿಸಬಹುದಾಗಿದೆ.