ಇಸ್ರೋದ ಹೈದರಾಬಾದ್ ಮೂಲದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಬಾಹ್ಯಾಕಾಶದಿಂದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದ ಒಂದು ಉಪಗ್ರಹ ಚಿತ್ರವನ್ನು ಬಿಡುಗಡೆ ಮಾಡಿದೆ. ಬಾಹ್ಯಾಕಾಶದಿಂದ ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹದಿಂದ ಡಿಸೆಂಬರ್ 16 ರಂದು ಫೋಟೋ ಕ್ಲಿಕ್ಕಿಸಲಾಗಿದ್ದು, ಇಂದು ಇಸ್ರೋ ಹಂಚಿಕೊಂಡಿದೆ. ಚಿತ್ರದಲ್ಲಿ ದಶರಥ ಮಹಲ್, ಅಯೋಧ್ಯೆ ರೈಲು ನಿಲ್ದಾಣ ಮತ್ತು ಸರಯೂ ನದಿಯನ್ನು ಸಹ ತೋರಿಸುತ್ತಿದೆಯಾಗಿದೆ. ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರ ಸಮ್ಮುಖದಲ್ಲಿ ವೈದಿಕ ಸ್ತೋತ್ರಗಳ ನಡುವೆ ಮಧ್ಯಾಹ್ನ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ನಡೆಸಿದ ಬಳಿಕ ಮಹಾಮಸ್ತಕಾಭಿಷೇಕ ನಡೆಯಲಿದೆ. ಈಗಾಗಲೇ ಸಾವಿರಾರು ಮಂದಿ ಯತಿಗಳು, ಸಾಧುಗಳು, ಗಣ್ಯಾತೀಗಣ್ಯರು ಅಯೋಧ್ಯೆಗೆ ಆಗಮಿಸಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಅಯೋಧ್ಯೆಯಲ್ಲಿ ವಿದ್ಯುದೀಪಾಲಂಕಾರ ಮತ್ತು ಪುಷ್ಪಾಲಂಕಾರ ಮಾಡಲಾಗಿದೆಯಾಗಿದೆ.