ಬೆಂಗಳೂರು : ಈಗಾಗಲೇ ವಸತಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ನಿರ್ಬಂಧ ಹೇರಿ ಆದೇಶವನ್ನು ಹಿಂಪಡೆದಿದ್ದು ಹಾಗೂ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪುರವರ ಪ್ರಸಿದ್ದ ಕವಿತಯನ್ನು ತಿರುಚಿದಕ್ಕೆ ಸಂಬಂಧಪಟ್ಟಂತೆ ವಿವಾದ ಉಂಟು ಮಾಡಿದ್ದ ರಾಜ್ಯ ಸರ್ಕಾರ ಮುಜುಗರಕ್ಕೆ ಈಡಾಗಿದೆ. ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ಹೊಸ ವಿವಾದ ಮೈ ಮೇಲೆ ಎಳೆದುಕೊಂಡಿದ್ದು ಈಗ ಸಚಿವ ಶಿವರಾಜ್ ತಂಗಡಗಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ ಕರೆ
ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮ್ಮಗೆ ಎಲ್ಲಾ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ ಶಾಲೆ ಅಂತ ಪ್ರಿಂಟ್ ಮಿಸ್ಟೇಕ್ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದರು.
ಶೋಭಾ ಕರಂದ್ಲಾಜೆಗೆ ಲೋಕಸಭೆ ಟಿಕೇಟ್ ನೀಡದಂತೆ ಹೈಕಮಾಂಡ್‌ಗೆ ಕಾರ್ಯಕರ್ತರಿಂದ ಪತ್ರ!
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ!