ದಕ್ಷಿಣಕನ್ನಡ : ಎಂದು ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಪಾಂಡಿಯಲ್ಲಿ ಸಿಡಿಲು ಬಡಿದು ಓರ್ವ ಕಾರ್ಮಿಕ ಸಾವನಪ್ಪಿದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ಹಾಗೂ ಗಾಯಗೊಂಡವರು ನದಿ ಬದಿಯಲ್ಲಿ ಶೆಡ್ ನಲ್ಲಿ ಇದ್ದರು. ಇವರೆಲ್ಲರೂ ಬಿಹಾರ್ ಮೂಲದವರು ಎಂದು ಹೇಳಲಾಗುತ್ತಿದ್ದು, ಸಿಡಿಲಿಗೆ ಓರ್ವ ಕೂಲಿಕಾರ್ಮಿಕ ಸಾವನಪ್ಪಿದ್ದು ಇಬ್ಬರಿಗೆ ಗಾಯಗಳಾಗಿದೆ. ಮರಳು ತೆಗೆಯುವ ಕೆಲಸ ಮಾಡುತ್ತಿದ್ದ.ಬಿಹಾರ್ ಮೂಲದವರು ಎಂದು ತಿಳಿದು ಬಂದಿದೆ ಇನ್ನು ಘಟನೆಯಲ್ಲಿ ಗಾಯಗೊಂಡ ಮತ್ತಿಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೆ ಮಧ್ಯಾಹ್ನದ ವೇಳೆಗೆ ವಿಜಯಪುರ, ಚಿಕ್ಕಮಗಳೂರು, ಹುಬ್ಬಳ್ಳಿ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳೂ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಮೂರ್ನಾಲ್ಕು ದಿನ ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯಾಹ್ನ ಭಾರಿ ಮಳೆ ಸುರಿಯಿತು. ಗಾಳಿ, ಗುಡುಗು ಸಹಿತ ಸುಮಾರು ಅರ್ಧಗಂಟೆಗಳ ಮಳೆಯಾಯಿತು.ಈ ಮಧ್ಯೆ, ಬೆಂಗಳೂರಿನಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.