ಬೆಂಗಳೂರು : ಸ್ವಿಡ್ಡರ್ಲೆಂಡ್ನ ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ರಾಜ್ಯಕ್ಕೆ 23,000 ಕೋಟಿ ರು.ಗಳಿಗೂ ಹೆಚ್ಚಿನ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೃಂಗದ ವೇಳೆ ರಾಜ್ಯದ ನಿಯೋಗವು ನೆನ್ನೆ, ಎಚ್ಪಿ, ಎಚ್ಸಿಎಲ್, ವೋಲ್ಲೊ ಗ್ರೂಪ್, ಐಕಿಯಾ, ಸೋನಿ, ಮೈಕ್ರೋಸಾಫ್ಟ್, ಹಿಟಾಚಿ ಮತ್ತಿತರ ಜಾಗತಿಕ ಉದ್ಯಮಗಳ ಪ್ರಮುಖರ ಜೊತೆಗೆ 50ಕ್ಕೂ ಹೆಚ್ಚಿನ ಸಭೆಗಳನ್ನು ನಡೆಸಿತ್ತು.
ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥದ ಬೃಹತ್ ಗಾತ್ರದ ಡೇಟಾ ಸೆಂಟರ್ಸ್ಥಾಪಿಸಲು ವೆಬ್ ವೆರ್ಕಸ್ ಕಂಪನಿಯು 20,000 ಕೋಟಿ ರು. ಬಂಡವಾಳ ಹೂಡಿಕೆಯ ಬದ್ಧತೆ ಪ್ರಕಟಿಸಿದೆ. ಇದರಿಂದ 1,000 ಜನರಿಗೆ ಉದ್ಯೋಗಾವ ಕಾಶಗಳು ದೊರೆಯಲಿವೆ. ಡಿಜಿಟಲ್ ಕೌಶಲ ವೃದ್ಧಿ ಪ್ರಕ್ರಿಯೆ ಹಮ್ಮಿ ಕೊಳ್ಳಲು ಮೈಕ್ರೋಸಾಫ್ಟ್ ವಾಗ್ದಾನ ಮಾಡಿದೆ. ಗ್ರಾಮೀಣ ಪ್ರದೇಶ ಕೇಂದ್ರೀತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪನಿಯು ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಹೇಳಿದರು.
ಬೆಂಗಳೂರಿನ ಆಚೆಗೂ ಕೈಗಾರಿಕೆಗಳ ಅಭಿವೃದ್ಧಿಗೆ ಸಮಾನ ಕೊಡುಗೆ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮ ವಹಿವಾಟು ಆರಂಭಿಸಲು ಹಲವಾರು ಕಂಪನಿಗಳು ಆಸಕ್ತಿ ತೋರಿಸಿವೆ. ವಿಜಯಪುರ, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ ಕೈಗಾರಿಕೆಗಳ ಸಮಾನ ಅಭಿವೃದ್ಧಿ ಸಾಧಿಸುವುದಕ್ಕೆ ಕೊಡುಗೆ ನೀಡುವ ಹಲವಾರು ಉಪಕ್ರಮಗಳನ್ನು ಹಮ್ಮಿಕೊಳ್ಳಲಿವೆ ಎಂದು ಹೇಳಿದರು.
ವಿಜಯಪುರದಲ್ಲಿ ಲುಲು ಗ್ರೂಪ್
ಲುಲು ಗ್ರೂಪ್, ಬಿಎಲ್ ಆಗೊ ವಿಜಯಪುರದಲ್ಲಿ ತಮ್ಮನೆಲೆ ವಿಸ್ತರಿಸಲಿವೆ. ವಿಜಯಪುರದಲ್ಲಿ 300 ಕೋಟಿ ರು.ವೆಚ್ಚದಲ್ಲಿ ಹೊಸಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸಲು ಬಂಡವಾಳ ಹೂಡಿಕೆಗೆ ಲುಲು ಸಮೂಹವು ಯೋಜಿಸಿದೆ. ಅದೇರೀತಿ ಬಿಎಲ್ ಅಟ್ರೊ ಕಂಪನಿಯು ವಿಜಯಪುರದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕ ಆರಂಭಿಸಲಿದೆ. ದೇಶಿ ಮತ್ತು ರಫ್ತು ಮಾರುಕಟ್ಟೆಗಳಿಗೆ ಪೂರೈಸಲು ಸ್ಥಳೀಯ ಆಹಾರ ಉತ್ಪನ್ನಗಳನ್ನು ಖರೀದಿಸಿ ಅವುಗಳ ಶ್ರೇಣೀಕರಣ, ವಿಂಗಡಣೆ ಮತ್ತು ಪ್ಯಾಕೇಜಿಂಗ್ ಉದ್ದೇಶಕ್ಕೆ ಈ ಘಟಕ ನೆರವಾಗಲಿದೆ ಎಂದರು.
ಇನ್ನು, ಸ್ಮಾರ್ಟ್ ಸಿಟಿಮೂಲಸೌಲಭ್ಯ, ನವೀಕರಿಸಬಹು ದಾದ ಇಂಧನ ಪರಿಹಾರಗಳು, ಡೇಟಾ ಕೇಂದ್ರಗಳು ಮತ್ತು ಸಂಬಂಧಿತ ವಲಯಗಳಲ್ಲಿ ವಿವಿಧ ಕಂಪನಿಗಳಿಂದ ಒಟ್ಟಾರೆ 3,000 ಕೋಟಿ ರು. ಮೊತ್ತದ ಬಂಡವಾಳ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ. ಎಬಿ ಇನ್ಬೇವ್ ಇಂಡಿಯಾ ಕಂಪನಿಯು ಕರ್ನಾಟಕದಲ್ಲಿ ತನ್ನ ಮದ್ಯ ತಯಾರಿಕಾ ಘಟಕಗಳ ತಯಾರಿಕಾ ಸಾಮರ್ಥ್ಯ ಹೆಚ್ಚಿಸಲು 400 ಕೋಟಿ ರು. ಮೊತ್ತದ ಬಂಡವಾಳ ತೊಡಗಿಸುವ ಇಂಗಿತ ವ್ಯಕ್ತಪಡಿಸಿದೆ ಎಂದರು.