ಬೆಂಗಳೂರು : ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗು ಬಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತಂತೆ ಸಚಿವ ಕೆ ಎನ್ ರಾಜಣ್ಣ ಮಾತನಾಡಿದ್ದು, ನಾನು ಸಿಎಂ ಪರ ಅಂತಲ್ಲ ನಾನು ಪ್ರಜಾಪ್ರಭುತ್ವದ ಪರ. ನಾನು ಹಗರಣ ಮಾಡಿದರೆ ತನಿಖೆ ಮಾಡಲಿ. ಬಡವರ ಪರ ಸಿಎಂ ಸಿದ್ದರಾಮಯ್ಯ ಕೆಲಸ ಮಾಡುತ್ತಾರೆ ಅದಕ್ಕೆ ಸಿದ್ದರಾಮಯ್ಯರ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಿಸಿ ವಿಚಾರವಾಗಿ ಡಿಕೆ ಶಿವಕುಮಾರ್ ಅವರು ಮಾತನಾಡಿದಕ್ಕೆ ಪ್ರತಿಕ್ರಿಯಿಸಿದ ಅವರು ವಾರ್ನಿಂಗ್ ಗೆ ಎಲ್ಲ ನಾ ಹೆದರಕೋತಿನ? ಬಾಯಿಗೆ ಎಲ್ಲರೂ ಬೀಗ ಹಾಕಿಕೊಳ್ಳಬೇಕು. ಅವರು ಹೇಳಿದ್ದಕ್ಕೆ ಬಾಯಿ ಮುಚ್ಚಿಕೊಂಡು ಇರಲು ಆಗುವುದಿಲ್ಲ. ಸ್ವಾಮೀಜಿಗಳು ಹೇಳಿದಂತೆ ಸಿಎಂ ಮಾಡುವುದಕ್ಕೆ ಆಗುತ್ತಾ ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಕೇಂದ್ರ ಜನ ಹೇಳಿಕೆ ನೀಡಿದರು.

ಎಲ್ಲರೂ ಸುಮ್ಮನೆ ಇದ್ದರೆ ನಾನು ಸುಮ್ಮನೆ ಇರುತ್ತೇನೆ. ಸಿದ್ದರಾಮಯ್ಯ ರಾಜೀನಾಮೆ ಕೇಳಿದರೆ ಸುಮ್ಮನೆ ಇರಬೇಕಾ? ಅದನ್ನು ಕೇಳಿಕೊಂಡು ನಾನು ಸುಮ್ಮನಿರಬೇಕಾ? ಸ್ವಾಮೀಜಿಗಳು ಹೇಳುವುದನ್ನು ಕೇಳೋಕೆ ಆಗುತ್ತಾ? ಶಾಮನೂರು ಶಿವಶಂಕರಪ್ಪ ಮಾಡಿ ಅಂತ ಶ್ರೀಗಳು ಕೇಳ್ತಾರೆ. ಸತೀಶ್ ಜಾರಕಿಹೊಳಿ ಮಾಡಿ ಅಂತ ಅವರ ಸ್ವಾಮೀಜಿ ಹೇಳ್ತಾರೆ. ಸ್ವಾಮೀಜಿ ಹೇಳಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ.

ಸಂಸದರಾಗಿ ಡಿಕೆ ಸುರೇಶ್ ಒಳ್ಳೆಯ ಕೆಲಸ ಮಾಡಿದ್ದಾರೆ. ಪರಿಣಾಮಕಾರಿಯಾಗಿ ಕೆಲಸ ಮಾಡುವವರಲ್ಲಿ ಡಿಕೆ ಸುರೇಶ್ ಪ್ರಮುಖರು. ಸ್ವಾಮೀಜಿಗಳು ಎಲ್ಲರೂ ಒಂದಾಗಿ ಅವರನ್ನು ಸೋಲಿಸಿದ್ರು.ದೇವೇಗೌಡರು ಹುಟ್ಟು ಹಾಕಿದ ಸ್ವಾಮೀಜಿಗಳು ಇವರು.ಯಾರನ್ನು ಸಿಎಂ ಮಾಡಬೇಕೆಂದು ವರಿಷ್ಠರು ಶಾಸಕರು ನಿರ್ಧರಿಸುತ್ತಾರೆ. ಸ್ವಾಮೀಜಿಗಳು ಹೇಳಿದಂತೆ ಸಿಎಂ ಮಾಡುವುದಕ್ಕೆ ಆಗಲ್ಲ ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದರು.

Share.
Exit mobile version