ಹೈದರಾಬಾದ್/ ನರಸಾಪುರ (ತೆಲಂಗಾಣ): ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವವರೆಗೆ ತಿಂಗಳಿಗೆ 8,500 ರೂ.ಗಳ ತರಬೇತಿ ಸ್ಟೈಫಂಡ್ ನೀಡಲಾಗುವುದು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ನರಸಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡುತ್ತ, ಒಂದು ಗುಂಪು ಸಂವಿಧಾನವನ್ನು ರಕ್ಷಿಸಲು ಬಯಸಿದರೆ, ಮತ್ತೊಂದು ಗುಂಪು ಸಂವಿಧಾನದ ಅಗತ್ಯವಿಲ್ಲ ಮತ್ತು ಅದನ್ನು ರದ್ದುಗೊಳಿಸಲಾಗುವುದು ಮುಂದಾಗಿದ್ದಾರೆ ಅಂತ ಹೇಳಿದರು. ಇನ್ನೂ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ರಾಹುಲ್ ಗಾಂಧಿ, ಶಿಕ್ಷಣ, ಉದ್ಯೋಗ ಮತ್ತು ಮತದಾನದ ಹಕ್ಕು ಸಂವಿಧಾನದ ಮೂಲಕ ಮಾತ್ರ ನಮಗೆ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಸಂವಿಧಾನದ ಜೊತೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. ಮೀಸಲಾತಿಯನ್ನು ರದ್ದುಗೊಳಿಸಲು ಬಿಜೆಪಿ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

 

Share.
Exit mobile version