ಮಂಗಳೂರು : ಜನವರಿ 22ರಂದು ಅಯೋಧ್ಯೆಯಲ್ಲಿ ರಾಮನಗರ ಉದ್ಘಾಟನೆಗೊಳ್ಳಲಿದ್ದು ಇದಕ್ಕೆ ಕಾಂಗ್ರೆಸ್ ಪಕ್ಷ ಆಹ್ವಾನ ಪತ್ರಿಕೆಯನ್ನು ಗ್ರಾಹಕರಿಸಿದ್ದು ಈ ವಿಷಯವಾಗಿ ಸಚಿವ ನಾಗೇಂದ್ರ ಪ್ರತಿಕ್ರಿಯೆ ನೀಡಿದ್ದು ಶ್ರೀರಾಮ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯ ಗೊಳಿಸಲು ಹೊರಟಿದೆ ಎಂದು ಕ್ರೀಡಾ ಸಚಿವ ನಾಗೇಂದ್ರ ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನೂ ರಾಮ ಭಜನೆ ಮಾಡುತ್ತಾ ಬೆಳೆದವನು. ಆದರೆ ಕಾಂಗ್ರೆಸ್ಸಿ ಗರಿಗೆ ಕೋಮು ಭಾವನೆಯ ರಾಮ ಬೇಡ, ರಾಮ, ಸೀತೆ, ಲಕ್ಷ್ಮಣ, ಭರತ, ಅಳಿಲು ಸೇವೆ ಮಾಡಿದ ಜಾಂಬವ ಹೀಗೆ ಎಲ್ಲರೂ ಇದ್ದ ರಾಮ ನಮಗೆ ಬೇಕು. ರಾಮ ಮಂದಿರ ಬಿಜೆಪಿಗರ ಸ್ವತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ತಪ್ಪು ಎಂದರು.
ಅನಂತ್ ಮಾತಿಗೆ ಕಿಮ್ಮತ್ತಿಲ್ಲ: ನಾಗೇಂದ್ರ
ನಾಡಿನ ಪುರಾತನ ಮಸೀದಿ ಗಳನ್ನು ಒಡೆದು ಅಲ್ಲಿ ದೇವಸ್ಥಾನ ನಿರ್ಮಿಸು ತ್ತೇವೆ ಎನ್ನುವ ಕೆನರಾ ಸಂಸದ ಅನಂತ ಕುಮಾರ ಹೆಗಡೆ ಮಾತಿಗೆ ಕಿಮ್ಮತ್ತಿಲ್ಲ ಎಂದು ಸಚಿವನಾಗೇಂದ್ರ ಹೇಳಿದ್ದಾರೆ. ‘ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಇಂತಹ ಮಾತುಗಳು ಸಹಜ, ಅದನ್ನು ಪಕ್ಷ ಕೂಡ ಗಂಭೀರ ಪರಿಗಣಿಸಬೇಕಾಗಿಲ್ಲ ಎಂದರು.
ಅವರು ಜಾತಿ, ಧರ್ಮ ಬೇರೆ ಮಾಡಿಯೇ ರಾಜಕಾ ರಣ ಮಾಡಿದವರು. ಶಾಂತಿ ಕದಡಿ ರಾಜ ಕೀಯ ಲಾಭ ಪಡೆಯುವ ವ್ಯಕ್ತಿ ಅವರು. ಯಾವುದೇ ಪುಸ್ತಕದಲ್ಲಿ ಮಸೀದಿಗಳು ದೇವಸ್ಥಾನ ಆಗಿತ್ತು ಎಂದು ಉಲ್ಲೇಖ ಇಲ್ಲ. ಅವರಿಗೆ ತಲೆಗೆ ಬಂದಿದ್ದನ್ನು ಹೇಳಿಕೊಂಡು ಹೋಗುತ್ತಾರೆ ಎಂದು ಹೇಳಿದ್ದಾರೆ.