ಹಾಸನ: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ. ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ ದೂರು ನೀಡಬಹುದು. ಅವರು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ತಂಡ ಸಿದ್ಧವಿದೆ. ಗುರುತು ಹಾಗೂ ಮಾಹಿತಿ ವಿಷಯದಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಾರೆ ಎಂಬ ಉದ್ದೇಶದಿಂದ ಎಸ್‌ಐಟಿಗೆ ದೂರು ನೀಡಲು ಸಹಾಯವಾಣಿ (6360938947) ತೆರೆಯಲಾಗಿತ್ತು. ಅಂದಿನಿಂದ ಇಲ್ಲಿಯ ವರೆಗೆ ಒಟ್ಟು 30 ಕ್ಕೂ ಹೆಚ್ಚು ಕರೆಗಳು ಬಂದಿವೆ ಎನ್ನಲಾಗಿದೆ.