ಶಿವಮೊಗ್ಗ : ಲೋಕಸಭೆ ಚುನಾವಣೆಗೆ ತಮ್ಮ ಪುತ್ರನಿಗೆ ಟಿಕೆಟ್ ನೀಡಿಲ್ಲವೆಂದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿಯ ಕೆ ಎಸ್ ಈಶ್ವರಪ್ಪ ಇದೀಗ ಮಾಜಿ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು ಬಿಜೆಪಿಯನ್ನು ಅಪ್ಪ-ಮಕ್ಕಳ ಹಿಡಿತದಿಂದ ಮುಕ್ತಗೊಳಿಸಬೇಕು ಎಂದು ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯನ್ನು ಅಪ್ಪ ಮಕ್ಕಳ ಹಿಡಿತದಿಂದ ಮುಕ್ತಗೊಳಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡಿದ್ದಾರೆ. ಶಿಕಾರಿಪುರದಲ್ಲಿ ತಂದೆ ಮಕ್ಕಳು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿದ್ದಾರೆ. ಶಿಕಾರಿಪುರ ಇತಿಹಾಸದಲ್ಲಿ ಹೆಚ್ಚು ಹಣ ಖರ್ಚು ಮಾಡಿ ಗೆದ್ದಿದ್ದಾರೆ ಈ ಮಾತನ್ನು ನಾನಲ್ಲ ಕಾಂಗ್ರೆಸ್ ಪಕ್ಷದವರೇ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅಪ್ಪ ಮಕ್ಕಳನ್ನು ಸೋಲಿಸಬೇಕು ನಾನು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ತಿಳಿಸಿದರು.