ಬೆಂಗಳೂರು : ಕಳೆದ ವರ್ಷ ಮಳೆಯಾಗದೆ ತೀವ್ರ ಬರಗಾಲ ಎದುರಿಸಿದ್ದ ರಾಜ್ಯ ಇದೀಗ ಈ ಬಾರಿ ವಾಡಿಗೆಯಂತೆ ಮಳೆಯಾಗುತ್ತಿದ್ದು ಜನರಲ್ಲಿ ಹಾಗೂ ರೈತರಲ್ಲಿ ಸಂತಸ ಉತ್ತರಿಸಿದೆ ಇದೀಗ ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ ಮಧ್ಯಾಹ್ನದಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದೆ.
ನಗರದ ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ಲಾಲ್ಬಾಗ್, ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ ಸದಾಶಿವನಗರ, ಶಿವಾಜಿನಗರ, ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಹೆಬ್ಬಾಳ, ಯಲಹಂಕ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆ ಹಿನ್ನಲೆ ವಾಹನ ಸವಾರರು ರಸ್ತೆಯಲ್ಲಿ ತೀವ್ರ ಪರದಾಟ ನಡೆಸಿದರು.
ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.11ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಉತ್ತರ ಕರ್ನಾಟಕದ ಕೆಲವೆಡೆ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ.ಹಾಗಾಗಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.