ಬೆಂಗಳೂರು : ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ಗಾರೆ ಮೇಸ್ತ್ರಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಗುಣಿ ಅಗ್ರಹಾರ ಗ್ರಾಮದ ನಿವಾಸಿ ಹರೀಶ್ (33) ಮೃತಪಟ್ಟ ಗಾರೆ ಮೇಸ್ತ್ರಿ ಎಂದು ತಿಳಿದು ಬಂದಿದೆ.
ಕೆಲಸ ಮುಗಿಸಿ ತಡರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಒಂದು ದುರಂತ ಸಂಭವಿಸಿದೆ.ಹರೀಶ್ ಮದ್ಯ ಸೇವಿಸಿದ ಬಳಿಕ ಊಟ ಪಾರ್ಸೆಲ್ ಮಾಡಿಸಿಕೊಂಡಿದ್ದರು. ಮನೆಗೆ ತೆರಳುತ್ತಿದ್ದಾಗ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.