ಬೆಂಗಳೂರು : ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಮಹಿಳಾ ಟೆಕ್ಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪೂಜಾ (22) ಎಂದು ಹೇಳಲಾಗುತ್ತಿದ್ದು, ಎರಡು ವರ್ಷಗಳ ಹಿಂದೆ ಸುನಿಲ್ ಎನ್ನುವವನನ್ನು ಮದುವೆಯಾಗಿದ್ದರು. ವರದಕ್ಷಣೆಗೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ಪೂಜಾ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನವರು ಎಂದು ಹೇಳಲಾಗುತ್ತಿದೆ ಎರಡು ವರ್ಷಗಳ ಹಿಂದೆ ಸುನಿಲ್ ಎನ್ನುವವರನ್ನು ಮದುವೆಯಾಗಿದ್ದರು.
ಆದರೆ ಮನೆಯಲ್ಲಿ ಪತಿಯ ಹಾಗೂ ಮೈದುನ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಹೀಗಾಗಿ ಪತಿ ಹಾಗೂ ಮೈದುನನ ವಿರುದ್ಧ ಮೃತ ಪೂಜಾಳ ಕುಟುಂಬಸ್ಥರು ಗಂಗಮ್ಮನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಲಿಸಿ ಕೊಂಡು ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.