ವಿಜಯಪುರ : ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ದೇಗುಲದ ಮುಂದೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.
ಅನ್ಯಕೋಮಿನವರಿಗೆ ಅವಕಾಶ ನೀಡದಂತೆ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೂ ಹಿಂದೂ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿದೆ. ಸದ್ಯ ಇದು ಪರ ವಿರೋಧಕ್ಕೆ ಕಾರಣವಾಗಿದೆ.
ಈ ದೇಶದ ಕಾನೂನಿಗೆ, ನಾಯಾಲಯದ ತೀರ್ಪಿಗೆ ಗೌರವ ನೀಡದವರಿಗೆ, ಪದೇ ಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ, ಜಿಹಾದ್ ಹೆಸರಿನಲ್ಲಿ ದೇಶದ ಅಖಂಡತೆಗೆ ಮಾರಕವಾಗಿರುವ ಕ್ರೂರ ಮತಾಂಧರೊಂದಿಗೆ ಹಿಂದೂಗಳು ವ್ಯಾಪಾರ, ವಹಿವಾಟು ನಡೆಸಲ್ಲ. ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ದೇವಸ್ಥಾನದ ಎದುರಿಗೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.