ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮರಾಠಿ ಪ್ರೇಮ ಮತ್ತೆ ಮುಂದುವರೆದಿದ್ದು ಬೆಳಗಾವಿ ನಗರದ ಕುವೆಂಪು ನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮರಾಠಿಯಲ್ಲಿ ಭಾಷಣ ಮಾಡಿದ್ದು,ಮಗ ಮೃಣಾಲ ಸ್ಪರ್ಧಿಸಿದ್ರೆ ನಾವೆಲ್ಲ ಮತ ಹಾಕುತ್ತೇವೆ ಎಂದು ಮರಾಠಿಗರು ತಿಳಿಸಿದ್ದಾರೆ. ಈ ವೆಳೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕರ್ತರಿಗೆ ಮರಾಠಿಯಲ್ಲಿಯೇ ಭಾಷಣ ಮಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೇಳುವುದಿಲ್ಲ ಹೈಕಮಾಂಡ ಟಿಕೆಟ್ ಕೊಟ್ಟರೆ ಪುತ್ರ ಸ್ಪರ್ಧಿಸುತ್ತಾನೆ.ಟಿಕೆಟ್ ಕೇಳಲ್ಲ ಅಂತಾನೆ ಮಗನಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಲ್ಲಾ ಸಮುದಾಯದವರಿಗೆ ಮರಾಠಿ ಭಾಷೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.ಸಚಿವರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮ ಪರಾಠಮಯವಾಗಿತ್ತು ಎಂದು ಹೇಳಲಾಗುತ್ತಿದೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕುರಿತು ಸಿದ್ಧತೆ ನಡೆಸಿದ್ದೇವೆ. ರಾಜಕೀಯ ವ್ಯಕ್ತಿಗಳು ಚುನಾವಣೆಯನ್ನು ಹಗುರವಾಗಿ ಪರಿಗಣಿಸುವುದಿಲ್ಲ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಐದು ಪ್ರಮುಖ ಗ್ಯಾರಂಟಿ ಭರವಸೆಯನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ. ಅದನ್ನೇ ಇಟ್ಟುಕೊಂಡು ನಾವು ಲೋಕಸಭಾ ಚುನಾವಣೆ ಎದುರಿಸುತ್ತೇವೆ ಎಂದರು.