ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ.ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾರ್ಚ್, 31 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರಾಮುವಿ, ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಸ್ನಾತಕ/ಸ್ನಾತಕೋತ್ತರ ಕೋಸ್ರ್ಗಳಾದ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲ್ಯು, ಎಂ.ಎ, ಎಂ.ಸಿ.ಜೆ, ಎಂ.ಕಾಂ, ಎಂ.ಎಸ್ಸಿ, ಎಂಲಿಬ್ಐಎಸ್ಸಿ,{ಎಂಬಿಎ, ಎಂಸಿಎ, ಎಂಎಸ್ಡಬ್ಲ್ಯು ಮತ್ತು ಪಿಜಿ ಸರ್ಟಿಫಿಕೇಟ್ ಡಿಪೆÇ್ಲಮಾ ಸರ್ಟಿಫಿಕೇಟ್ ಪೆÇ್ರೀಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕೆಎಸ್ಒಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ ಎಂದು ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಕ.ರಾ.ಮು.ವಿ. ಪ್ರಾದೇಶಿಕ ನಿರ್ದೇಶಕರನ್ನು ಸಂಪರ್ಕ ಮಾಡಬಹುದಾಗಿದೆ.