ಬೆಂಗಳೂರು:ಬರ ಪರಿಹಾರದ ಹಣ ರೈತರ ಸಾಲದ ಖಾತೆಗಳಿಗೆ ಜಮೆಗೆ ಸಂಬಂಧಪಟ್ಟಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಟ್ವಿಟರ್‌ನಲ್ಲಿ ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿದ್ದು, ಕೂಡಲೇ ರಾಜ್ಯ ಸರ್ಕಾರ ರೈತರ ನೇರವಿಗೆ ಬರಬೇಕಾಗಿದೆ ಅಂತ ಹೇಳಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಸರಕಾರ ಕೈಕಟ್ಟಿ ಕೂತಿದೆ.
ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ.ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎನ್ನುವುದು ನನ್ನ ಆಗ್ರಹ ಅಂತ ಹೇಳಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ @INCKarnataka ಸರಕಾರ ಕೈಕಟ್ಟಿ ಕೂತಿದೆ.
•ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ…— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2024