ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದ್ದು ಅಂತಿಮ ಮುದ್ರೆಯನ್ನು ಸಿಎಂ ಒತ್ತಬೇಕಾಗಿದೆ ಎನ್ನಲಾಗಿದೆ.
ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಇತ್ತೀಚಿಗೆ ನಡೆದ ಬೆಂಗಳೂರು ನಗರದ ಖಾಸಗಿ ಹೊಟೇಲ್ನಲ್ಲಿ ಜರುಗಿದ ಕೆಎಂಎಫ್ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ. ಇದಲ್ಲದೇ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ತಮ್ಮ ಮೇಲೆ ರಾಜ್ಯದ ಜಿಲ್ಲಾ ಹಾಲು ಒಕ್ಕೂಟಗಳು ಹಾಕುತ್ತಿರುವ ಒತ್ತಡದ ಬಗ್ಗೆ ಸಿಎಂ ಬಳಿ ಚರ್ಚಿಸಿದ್ದರೆ ಎನ್ನಲಾಗಿದೆ. ಇನ್ನೂ ಕೆಎಂಎಫ್, 3 ರೂ. ಹೆಚ್ಚಳ ಮಾಡಿದ್ರೆ, ಅದರ ಲಾಭವನ್ನು ರೈತರಿಗೆ ನೀಡಲು ನಿರ್ಧಾರ ಮಾಡಿದೆ ಎನ್ನಲಾಗಿದೆ.