ರಾಯಚೂರು : ಜಿಲ್ಲೆಯ ಗಂಜಳ್ಳಿ ಗ್ರಾಮದಲ್ಲಿ ಕೃಷ್ಣ ನದಿಯಲ್ಲಿ ಕುರಿಗೆ ನೀರು ಕುಡಿಸಲು ಹೋದ ಬಾಲಕ ನಾಪತ್ತೆಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಮೊಸಳೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ವಿಶ್ವ (11) ಎಂಬ ಬಾಲಕನ ಶೋಧ ಕಾರ್ಯ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣ ನದಿಯಲ್ಲಿ ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಗ್ರಾಮಸ್ಥರು, ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ.