ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹಿರೇಮಠಳನ್ನು ಫಯಾಜ್ ಎನ್ನುವ ಆರೋಪಿ ಭೀಕರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಇದು ವೈಯಕ್ತಿಕ ವಿಚಾರಕ್ಕೆ ಆಗಿರುವ ಕೊಲೆಯಾಗಿದ್ದು ರಾಜ್ಯದಲ್ಲಿ ಕಾನೂನು ಸವ್ಯವಸ್ಥೆ ಬಹಳ ಚೆನ್ನಾಗಿದೆ ಎಂದು ತಿಳಿಸಿದರು.

‘ಕೈಬಿಟ್ಟ ಯೋಜನೆಗಳು ಕೈಕೊಟ್ಟ ಕಾಂಗ್ರೆಸ್ ಸರ್ಕಾರ’ : ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಚಾರ್ಜ್ ಶೀಟ್’ ಬಿಡುಗಡೆ

ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್​ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್​ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಭ್ರೂಣದ ಅಸಹಜತೆ: 28 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸಲು ಅಪ್ರಾಪ್ತ HIV ಪಾಸಿಟಿವ್ ಹುಡುಗಿಗೆ ಹೈಕೋರ್ಟ್ ಅನುಮತಿ

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದಾರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ ಎಂದರು.

Share.
Exit mobile version