ಶಿವಮೊಗ್ಗ : ಶಿವಮೊಗ್ಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ವರದಕ್ಷಿಣೆಗಾಗಿ ಪತಿಯ ಕುಟುಂಬಸ್ಥರಿಂದ ಕೊಲೆ ಆರೋಪ ಕೇಳಿಬರುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಚ್. ಜಂಕ್ಷನ್ ಗ್ರಾಮದಲ್ಲಿ ಗೃಹಿಣಿ ತೇಜಸ್ವಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪತಿ ಹಾಗೂ ಆತನ ಕುಟುಂಬಸ್ಥರಿಂದ ತೇಜಸ್ವಿನಿ ಕೊಲೆ ಆರೋಪ ಕೇಳಿಬರುತ್ತಿದೆ. ಭದ್ರಾವತಿ ಗ್ರಾಮಾಂತರ ಠಾಣೆಗೆ ಮೃತ ತೇಜಸ್ವಿನಿಯ ಪತಿ, ಅತ್ತೆ ಹಾಗು ಮಾವನ ವಿರುದ್ಧ ಇದೀಗ ಮೃತಳ ಕುಟುಂಬಸ್ಥರ ದೂರು ನೀಡಿದ್ದಾರೆ. ಪೊಲೀಸರು ದೂರು ನೀಡಿದರು ಕೂಡ ಕ್ರಮ ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕುತ್ತಿದ್ದಾರೆ
ಈ ಹಿನ್ನೆಲೆಯಲ್ಲಿ ಇದೀಗ ಎಚ್. ಜಂಕ್ಷನ್ ನಲ್ಲಿ ತೇಜಸ್ವಿನಿ ಮೃತ ದೇಹವನ್ನು ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರಾವತಿ ಲಕ್ಕವಳ್ಳಿ ರಸ್ತೆ ತಡೆದು ಕುಟುಂಬಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.