ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮಗಳು ನಡೆದಂತೆ ಮಾದರಿ ನೀತಿ ಸಂಹಿತೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹಾಗಾಗಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಈ ಒಂದು ಮಾದರಿ ನೀತಿ ಸಂಹಿತೆಗೆ ಸಿಎಂ ಸಿದ್ದರಾಮಯ್ಯ ಕೂಡ ಹೊರತಾಗಿಲ್ಲ.ಹೀಗಾಗಿ ಇಂದು ಮೈಸೂರು ಹಾಗೂ ಟಿ ನರಸೀಪುರ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರನ್ನು ತಪಾಸಣೆ ಮಾಡಲಾಯಿತು.
ಹಾಸನದಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರ ದುರ್ಮರಣ
ಹೌದು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮರಳುತ್ತಿದ್ದಾಗ ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್ಪೋಸ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಚೆಕ್ಪೋಸ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ, ಅಧಿಕಾರಿಗಳು ಕಾರಿನಲ್ಲಿದ್ದ ಸೂಟಕೇಸ್, ಬ್ಯಾಗ್, ಡ್ಯಾಷ್ ಬೋರ್ಡ್ ಸೇರಿ ಎಲ್ಲಾ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ. ಟಿ.ನರಸೀಪುರದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವಾಗ ತಪಾಸಣೆ ಮಾಡಲಾಗಿದೆ.