ಮೈಸೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಸರಾ ವೇದಿಕೆಯಲ್ಲೇ ಸ್ಪಷ್ಟ ಪಡಿಸಿದ್ದಾರೆ.
ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಮಾತನಾಡಿದಂತ ಅವರು, ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು.
ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.