ಬೆಂಗಳೂರು: ರಾಜ್ಯಾಧ್ಯಂತ ಇಂದು ಎಸ್ಎಸ್ ಎಲ್ ಸಿ ಪರೀಕ್ಷೆ-2ಗೆ ಮೊದಲ ದಿನದ ಗಣಿತ ಪರೀಕ್ಷೆ ನಡೆಯಿತು. ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದ್ದು, ಈ ಪರೀಕ್ಷೆಗೆ 1.56 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಪರೀಕ್ಷೆಯಲ್ಲಿ ನಕಲಿಗೆ ಯತ್ನಿಸಿದಂತ ಮೂವರನ್ನು ಡಿಬಾರ್ ಕೂಡ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಗಣಿತ ವಿಷಯದ ಪರೀಕ್ಷೆಗೆ 1,79,169 ಮಂದಿ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 1,56,658 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದೆ.
ಇಂದಿನ ಮೊದಲ ದಿನದ ಪರೀಕ್ಷೆಗೆ 22,511 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.87.44ರಷ್ಟು ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ಹಾಜರಾಗಿದ್ದಾರೆ. ಕಲಬುರ್ಗಿಯ ಆರಾಧನಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ನಲ್ಲಿ ನಕಲಿಗೆ ಪ್ರಯತ್ನಿಸಿದಂತ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಅಂತ ಮಾಹಿತಿ ನೀಡಿದೆ.
ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi
ಜನಸಾಮಾನ್ಯರಿಗೆ ʻದುಬಾರಿ ದುನಿಯಾʼ : ದವಸ, ಧಾನ್ಯಗಳು ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ |