Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ : CM ಸಿದ್ದರಾಮಯ್ಯ
KARNATAKA

15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ : CM ಸಿದ್ದರಾಮಯ್ಯ

By kannadanewsnow57

ಬೆಂಗಳೂರು : 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಆಯೋಜಿಸಿದ್ದ ಜಿ.ಎಸ್.ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು.ಕರ್ನಾಟಕ ಸರ್ಕಾರ ಜಿ. ಎಸ್.ಟಿ ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ ವಸೂಲು ಮಾಡುತ್ತಿತ್ತು. ಜಿ.ಎಸ್.ಟಿ ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ. ಪ್ರಸ್ತುತ 16ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ. 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದರು.

ಪ್ರಜಾ ಸರ್ಕಾರಕ್ಕೂ ಮುನ್ನ ರಾಜರುಗಳ ಕಾಲದಿಂದಲೂ ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು ಅನೇಕ ಶಾಸನಗಳಲ್ಲಿ ನಾವು ಕಾಣಬಹುದು. ಕದಂಬರು ಕರ್ನಾಟಕದಲ್ಲಿ ಮಾರಾಟ ತೆರಿಗೆಯನ್ನು ಪ್ರಾರಂಭಿಸಿದರು ಎಂದು ಶಾಸನಗಳು ಹೇಳುತ್ತವೆ. ರಾಜ್ಯ ನಡೆಸಲು ತೆರಿಗೆ ಅಗತ್ಯ. ತೆರಿಗೆ ಕೊಡಲು ಸಾಧ್ಯವಿದ್ದವರು ಮಾತ್ರ ತೆರಿಗೆಯನ್ನು ಕೊಡುತ್ತಾರೆ. ಪ್ರತಿ ಸರ್ಕಾರವೂ ಕೂಡ ತೆರಿಗೆಗಳನ್ನು ಸಂಗ್ರಹ ಮಾಡಿಯೇ ದೇಶವನ್ನು, ರಾಜ್ಯವನ್ನು ನಡೆಸುತ್ತದೆ. ಸಂವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂಪಾಯಿಗಳ ಅಗತ್ಯವಿದೆ. ಸಮಾಜದ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಇರಬೇಕಾದುದ್ದು ಅಗತ್ಯ ಎಂದರು.

ತೆರಿಗೆ ಸೋರಿಹೋಗದಂತೆ ವಾಣಿಜ್ಯ ತೆರಿಗೆ ಇಲಾಖೆ ಪ್ರಯತ್ನ ಮಾಡುತ್ತದೆ. 2022-23 ನೇ ಸಾಲಿನಲ್ಲಿ 1,22,821 ಕೋಟಿ ತೆರಿಗೆ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ 1,45,266 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ. ವಾಣಿಜ್ಯ ತೆರಿಗೆ ಇಲಾಖೆಯ 65 ಜನರಿಗೆ ಪ್ರಶಸ್ತಿಗಳನ್ನು ಇಂದು ವಿತರಿಸಲಾಗಿದ್ದು, ಉಳಿದ ಆರು ಸಾವಿರ ಅಧಿಕಾರಿಗಳು ಸಹ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಈ ಕಾರ್ಯಕ್ರಮ ಇತರರಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

1.7% reduction in taxes for state govt during 15th Finance Commission: Siddaramaiah 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ : CM ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

2 Mins Read

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

1 Min Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read
Recent News

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

State News
KARNATAKA

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

By kannadanewsnow09 KARNATAKA 2 Mins Read

ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ತನ್ನ 2025–26ನೇ ಸಾಲಿನ ’70ನೇ ರೈಲ್ವೆ ಸಪ್ತಾಹ’ವನ್ನು ಶನಿವಾರ (ಮೇ 9, 2026)…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.