ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯತಿಗೆ 1 ಕೋಟಿ ವಿಶೇಷ ಅನುದಾನ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಆಡಳಿತದಲ್ಲಿರುವ ರಾಜ್ಯ ಬಿಜೆಪಿ ಸರ್ಕಾರ ಕೊಳೆತು ನಾರುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಎಲ್ಲಾ ಭರವಸೆ ಈಡೇರಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ರಾಜ್ಯ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.
ಬಿಜೆಪಿ ಸರ್ಕಾರ 40 % ಅಲ್ಲ, 50 % ಕಮಿಷನ್ ದಂಧೆಯ ಸರ್ಕಾರ. ಕಮಿಷನ್ ಕೊಡದಿದ್ದರೆ ಬಿಜೆಪಿ ಶಾಸಕರು ಕಾಮಗಾರಿಗೆ ಅಡಿಗಲ್ಲು ಹಾಕಲ್ಲ ಎಂದು ವಾಗ್ಧಾಳಿ ನಡೆಸಿದರು. ಬಿಜೆಪಿ ಸರ್ಕಾರ ಆಲಿಬಾಬಾ ಮತ್ತು ಚಾಲೀಸ್ ಚೋರ್ ಸರ್ಕಾರ ಆಗಿದೆ. ಸಿಎಂ ಬೊಮ್ಮಾಯಿಗೆ ತಾಕತ್ ಇದ್ದರೆ ಬಹಿರಂಗ ಚರ್ಚೆಗೆ ಬರಲಿ , ನಾವು ನೀವು ನೀಡಿರುವ ಅನುದಾನ ಯೋಜನೆಯ ಬಗ್ಗೆ ಚರ್ಚಿಸೋಣ, ಸಿಎಂ ಬೊಮ್ಮಾಯಿ ಯಾವ ಚರ್ಚೆಗೂ ಬರಲ್ಲ ಅಂತಾರೆ, ಸಿಎಂ ಬೊಮ್ಮಾಯಿಗೆ ಧಮ್ ಇದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದರು.
JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನಲ್ಲಿ ಫೆ. 12ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ