ನವದೆಹಲಿ : ದೆಹಲಿಯಲ್ಲಿ ಅಕ್ರಮವಾಗಿ ಮಕ್ಕಳನ್ನು ಕಳಸಾಗಾಣೆ ಮಾಡುತ್ತಿದ್ದ ಹಲವು ಪ್ರದೇಶಗಳಲ್ಲಿ ಇದೀಗ ಸಿಬಿಐ ದಾಳಿ ನಡೆಸಿದ್ದು, ಅಲ್ಲದೆ ಮಕ್ಕಳನ್ನು 4 ರಿಂದ 5 ಲಕ್ಷಕ್ಕೆ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಬಂದ ತಕ್ಷಣ ದಾಳಿ ವೇಳೆ ಎರಡು ನವಜಾತ ಶಿಶುಗಳು ಸೇರಿದಂತೆ ಒಟ್ಟು 10 ಮಕ್ಕಳನ್ನು ಸಿಬಿಐ ಅಧಿಕಾರಿಗಳು ರಚನೆ ಮಾಡಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಾಲವರನ್ನು ವಶಪಡಿಸಿಕೊಂಡಿದ್ದು ಮಕ್ಕಳನ್ನು ಮಾರಾಟ ಕೂಡ ಮಾಡಲಾಗುತ್ತೆ ಎಂದು ತಿಳಿದುಬಂದಿದೆ.ಬಂಧಿತರಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಶುಕ್ರವಾರ ಸಂಜೆ ದೆಹಲಿ-ಎನ್ಸಿಆರ್ನ ಹಲವೆಡೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ.
ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾಹಿತಿ ಪ್ರಕಾರ ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಸಿಬಿಐ ತಂಡ ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ.