ಕೋಲಾರ: ಶೀಘ್ರವೇ 10 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪೋಟಕ ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವ ಮುನಿರತ್ನ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮುನಿರತ್ನ ಸಮ್ಮಿಶ್ರ ಸರ್ಕಾರವಿದ್ದಾಗ ನಾವು 17 ಶಾಸಕರು ಬಿಜೆಪಿಗೆ ಬಂದಿದ್ದೆವು, ಈಗ 10 ಶಾಸಕರು ಬಿಜೆಪಿ ಬರಲು ಸಜ್ಜಾಗಿದ್ದಾರೆ. ಶೀಘ್ರವೇ ಅವರನ್ನು ಕರತರಲಾಗುತ್ತದೆ ಎಂದು ಹೇಳಿದ್ದಾರೆ,
ಒಟ್ಟು 22 ಶಾಸಕರು ಬರಲು ರೆಡಿ ಇದ್ದಾರೆ, ನಾವು 10 ಮಂದಿಯನ್ನು ಆಯ್ಕೆ ಮಾಡಿದ್ದೇವೆ, ಕಾದು ನೋಡಿ ಬೇಕಾದರೆ 10 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮುನಿರತ್ನ ಹೇಳಿದ್ದಾರೆ.
ಅಶೋಕ್ ಹೇಳಿದ್ದೇನು..?
ಶೀಘ್ರವೇ 10 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ, ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ತಯಾರಿ ನಡೆಯುತ್ತಿದೆ ಎಂದು ಅಶೋಕ್ ಹೇಳಿದರು. ಇತ್ತೀಚೆಗೆ 10 ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ತಾಕತ್ ಇದ್ದರೆ ಅವರನ್ನು ಉಳಿಸಿಕೊಳ್ಳಲಿ ಎಂದು ಅಶೋಕ್ ಬಾಂಬ್ ಸಿಡಿಸಿದ್ದರು. ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಶೀಘ್ರವೇ 10 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಹಲವು ಚರ್ಚೆಗೆ ಕಾರಣವಾಗಿದೆ.
ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ, BSY ಬಿಡುವುದೇ: ಟ್ವಿಟ್ ಮೂಲಕ ಕಾಲೆಳೆದ ಕಾಂಗ್ರೆಸ್