ನಾಸಿಕ್: ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಟ್ರಕ್ ಡಿಕ್ಕಿ ಹೊಡೆದ ನಂತರ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಯನ್ನು ಗಮನಿಸಿದರೆ, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.
ಚಂದ್ವಾಡ್ ಬಳಿಯ ರೌದ್ ಘಾಟ್ನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಮಾರಣಾಂತಿಕ ಅಪಘಾತದ ನಂತರ ಸ್ಥಳೀಯರು ಸಹಾಯಕ್ಕೆ ಧಾವಿಸಿದರು.
ಬೆಳಿಗ್ಗೆ 10:45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನೇಕ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಅಪಘಾತ ಸಂಭವಿಸಿದೆ. ರಾಹುದ್ ಘಾಟ್ ನಲ್ಲಿ ಅಪಘಾತಗಳು ಸಾಮಾನ್ಯ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಜ್ವಲ್ ಪ್ರಕರಣ; ಪ್ರಧಾನಿ ಮೋದಿ, ದೇವೇಗೌಡರ ಕುಟುಂಬವೇ ನೇರ ಹೊಣೆ: ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ