ಶಾಂಘೈ: ನೈಋತ್ಯ ಚೀನಾದ ಆಸ್ಪತ್ರೆಯೊಂದರ ಮೇಲೆ ಮಂಗಳವಾರ ದಾಳಿ ನಡೆದಿದ್ದು, ಘಟನೆಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಆಸ್ಪತ್ರೆಯ ಆವರಣದಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದಿರುವುದನ್ನು ಕಾಣಬಹುದಾಗಿದೆ.
ದಾಳಿಯ ಸ್ವರೂಪ ಮತ್ತು ಅದರ ಹಿಂದಿನ ಉದ್ದೇಶದ ಬಗ್ಗೆ ಅಧಿಕಾರಿಗಳು ಇನ್ನೂ ತನಿಖೆ ನಡೆಸುತ್ತಿದ್ದಾರೆ. ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದ ಝೆನ್ಕ್ಸಿಯಾಂಗ್ ಕೌಂಟಿಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯ ಲಾಬಿಯಲ್ಲಿ ಕೋಲು ಹಿಡಿದಿರುವ ಇನ್ನೊಬ್ಬ ವ್ಯಕ್ತಿಯತ್ತ ವ್ಯಕ್ತಿಯೊಬ್ಬ ಚಾಕು ಹಿಡಿದಿರುವ ಚಿತ್ರಗಳನ್ನು ಮತ್ತು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳ ಚಿತ್ರಗಳನ್ನು ಸರ್ಕಾರಿ ಸುದ್ದಿ ಸೈಟ್ ದಿ ಪೇಪರ್ ಪ್ರಕಟಿಸಿದೆ.