ಕೂಚ್ ಬೆಹಾರ್ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಕೂಚ್ ಬೆಹಾರ್ನಲ್ಲಿ ಜಲ್ಪೇಶ್ಗೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಪಿಕಪ್ ವ್ಯಾನ್ಗೆ ವಿದ್ಯುತ್ ಸ್ಪರ್ಶ ಉಂಟಾದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಘಟನೆ ನಡೆದ ಕೂಡಲೇ ಪ್ರಯಾಣಿಕರನ್ನು ಅಲ್ಲಿದ್ದ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ವ್ಯಾನ್ನಲ್ಲಿದ್ದ 27 ಜನರ ಪೈಕಿ 10 ಮಂದಿ ಸಾವನ್ನಪ್ಪಿದ್ದು, 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರನ್ನು ಚಿಕಿತ್ಸೆಗಾಗಿ ಜಲ್ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವ್ಯಾನ್ನಲ್ಲಿದ್ದ ಡಿಜೆ ಸಿಸ್ಟಂನ ಜನರೇಟರ್ನ ವೈರಿಂಗ್ನಿಂದ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. “ಇಂದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೆಖ್ಲಿಗಂಜ್ ಪಿಎಸ್ ವ್ಯಾಪ್ತಿಯ ಧಾರ್ಲಾ ಸೇತುವೆಯಲ್ಲಿ ಜಲ್ಪೇಶ್ಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್ಗೆ ವಿದ್ಯುತ್ ಸ್ಪರ್ಶದ ಘಟನೆ ನಡೆದಿದೆ. ಜನರೇಟರ್ (ಡಿಜೆ ಸಿಸ್ಟಮ್) ವೈರಿಂಗ್ ಕಟ್ಆಗಿ ಈ ದುರ್ಘಟನೆ ಸಂಭವಿಸಿರಬಹುದು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಇದನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಲ್ಲಾ ಪ್ರಯಾಣಿಕರು ಸಿತಾಲ್ಕುಚಿ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಘಟನೆಯ ನಂತ್ರ ಚಾಲಕ ಪರಾರಿಯಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bank Holidays 2022: ಆಗಸ್ಟ್ನಲ್ಲಿ ಬ್ಯಾಂಕ್ಗಳು ʻ18 ದಿನʼ ಬಂದ್: ಇಲ್ಲಿದೆ ರಜಾ ದಿನಗಳ ಪಟ್ಟಿ…
ಪಿಕ್ನಿಕ್ಗೆಂದು ಹೋಗಿ ಬಾಲಾಸನ್ ನದಿಯಲ್ಲಿ ಸಿಲುಕಿದ್ದ 11 ವಿದ್ಯಾರ್ಥಿಗಳ ರಕ್ಷಣೆ