ತೆಲಂಗಾಣ : ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದವರಿಗೆ(ಎಸ್​ಟಿ) ಶೇ.10 ರಷ್ಟು ಮೀಸಲಾತಿ ಹೆಚ್ಚಿಸಿ ತೆಲಂಗಾಣ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.

BIG BREAKING NEWS: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET ರ‍್ಯಾಂಕಿಂಗ್ ಪರಿಸ್ಕೃತ ಪಟ್ಟಿ ಪ್ರಕಟ | KEA Releases CET ranking list

ಪ್ರಸ್ತುತ ರಾಜ್ಯದಲ್ಲಿ ಎಸ್‌ಟಿ ಸಮುದಾಯಕ್ಕೆ ಶೇ 6ರಷ್ಟು ಮೀಸಲಾತಿ ಇದೆ. ಇತ್ತೀಚಿಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ತಮ್ಮ ಸರ್ಕಾರವು ಸರ್ಕಾರಿ ಹುದ್ದೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಎಸ್​ಟಿ ಸಮುದಾಯಕ್ಕೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ತಿಳಿಸಿದ್ದರುc. ಅದರಂತೆ ಶನಿವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.

BIG BREAKING NEWS: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ CET ರ‍್ಯಾಂಕಿಂಗ್ ಪರಿಸ್ಕೃತ ಪಟ್ಟಿ ಪ್ರಕಟ | KEA Releases CET ranking list

ರಾಷ್ಟ್ರಪತಿಯಿಂದ ಸಿಗದ ಅಂಕಿತ: ಪರಿಶಿಷ್ಟ ಪಂಗಡಕ್ಕೆ ಶೇ.6 ರಿಂದ ಶೇ.10ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು 2017 ರಲ್ಲಿ ತೆಲಂಗಾಣ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗಿತ್ತು. ಬಳಿಕ ಅದು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಲು ಕೇಂದ್ರಕ್ಕೆ ಕಳುಹಿಸಲಾಗಿತ್ತು. 6 ವರ್ಷ ಕಳೆದರೂ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿಲ್ಲ. ಹೀಗಾಗಿ ಸರ್ಕಾರವೇ ನಿರ್ಧರಿಸಿ ಮೀಸಲಾತಿ ನೀಡುವ ಆದೇಶವನ್ನು ಹೊರಡಿಸಿದೆ.

https://kannadanewsnow.com/kannada/karnataka-examinations-authority-kea-releases-revised-cet-rankings-revised-list/
Share.
Exit mobile version