ದೆಹಲಿ: ಈಶಾನ್ಯ ದಿಲ್ಲಿಯ ನ್ಯೂ ಸೀಲಂಪುರ್ ಪ್ರದೇಶದಲ್ಲಿ 10 ವರ್ಷದ ಬಾಲಕನೊಬ್ಬನ ಮೇಲೆ ಆತನ ಮೂವರು ಸ್ನೇಹಿತರು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಅಷ್ಟೇ ಅಲ್ಲದೇ, ಬಾಲಕನ ಖಾಸಗಿ ಅಂಗಕ್ಕೆ ರಾಡ್ ಹಾಕಿ ಹಿಂಸಿಸಿರುವ ಘಟನೆ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 18 ರಂದು ಈ ಘಟನೆ ನಡೆದಿದೆ. ಘಟನೆ ನಂತ್ರ, ಬಾಲಕನ ಸ್ಥಿತಿ ಗಂಭೀರವಾಗಿದ್ದು, ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆತನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನೆ ಸಂಬಂಧ ಬಾಲಕನ ತಾಯಿ ದೆಹಲಿ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ. ಆಕೆ ನೀಡಿರುವ ದೂರಿನಲ್ಲಿ, ʻನನ್ನ ಮಗನನ್ನು ಆತನ ಮೂವರು ಸ್ನೇಹಿತರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅಸ್ವಾಭಾವಿಕ ಸಂಭೋಗ ನಡೆಸಿದ್ದಾರೆ. ಇದನ್ನು ವಿರೋಧಿಸಿದಾಗ ಅವನ ಮೇಲೆ ದುಷ್ಕರ್ಮಿಗಳು ದೊಣ್ಣೆ ಮತ್ತು ಇಟ್ಟಿಗೆಗಳಿಂದ ಥಳಿಸಿ, ಖಾಸಗಿ ಅಂಗಕ್ಕೆ ರಾಡ್ ಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು)ವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಈಗಾಗಲೇ ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿ ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದ್ದು, ಮೂರನೇ ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
BIGG NEWS : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ : 2-3 ದಿನದಲ್ಲಿ ಡಿಸ್ಚಾರ್ಜ್ ಸಾಧ್ಯತೆ
BIGG NEWS : ಇಂದು ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು : ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ `ಪೌರ ಸನ್ಮಾನ’