ಚಿಕ್ಕಮಗಳೂರು : ಶೃಂಗೇರಿಯಲ್ಲಿ 100 ಬೆಡ್ ಆಸ್ಪತ್ರೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕಳೆದ ಎರಡು ವರ್ಷಗಳಿಂದ ನಿರಂತರ ಹೋರಾಟ ಮಾಡಲಾಗುತ್ತಿದೆ. ಶೀಘ್ರದಲ್ಲೇ ಆಸ್ಪತ್ರೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷ ಕಳೆದರೂ ಕೂಡ ಆಸ್ಪತ್ರೆ ನಿರ್ಮಿಸುವ ಕೆಲಸ ಕೈಗೆತ್ತಿಕೊಂಡಿಲ್ಲ.

ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸುತ್ತಿರುವ ಶೃಂಗೇರಿ ಯುವಕರ ತಂಡಡ ಪಟ್ಟಣದ ಬೀದಿ ಬೀದಿಯಲ್ಲಿ ತಮಟೆ ಬಾರಿಸುವ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದೆ. 100 ಬೆಡ್ ಆಸ್ಪತ್ರೆ ನಿರ್ಮಿಸುವಂತೆ ಒತ್ತಾಯಿಸಿ ಭಿತ್ತಿಪತ್ರ ಪ್ರದರ್ಶನ ಮಾಡುವ ಮೂಲಕ ಸರ್ಕಾರದ ವಿರುದ್ಧ ಯುವಕರ ತಂಡ ಪ್ರತಿಭಟನೆ ನಡೆಸುತ್ತಿದೆ. ಧಾರ್ಮಿಕ ಕ್ಷೇತ್ರ. ಶೃಂಗೇರಿಗೆ ಪ್ರತಿನಿತ್ಯ ಸಾವಿರಾರು ವಾಹನಗಳು ಬಂದು ಹೋಗುತ್ತದೆ.

ನಿತ್ಯ ಸಾವಿರಾರು ವಾಹನಗಳು ಇಲ್ಲಿಗೆ ಬಂದು ಹೋಗುತ್ತವೆ. ಇಲ್ಲಿ ಸಣ್ಣ ಸಮಸ್ಯೆಗೂ ಶಿವಮೊಗ್ಗ, ಉಡುಪಿ ಅಥವಾ ಮಂಗಳೂರಿಗೆ ಹೋಗಬೇಕು. ಇಲ್ಲಿ ಏನಾದರೂ ಅಪಘಾತಗಳು ನಡೆದ್ರೆ ದೂರದ ಮಣಿಪಾಲ್, ಮಂಗಳೂರು ಆಸ್ಪತ್ರೆಗಳಿಗೆ ಹೋಗಬೇಕು ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಿಎಂ ಬೊಮ್ಮಾಯಿ ಕೂಡ ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೂ, ಎಲ್ಲರ ಮಾತುಗಳು ಭರವಸೆಯಾಗಿಯೇ ಉಳಿದುಕೊಂಡಿವೆ.

ಸಮಾನ ಮನಸ್ಕ ಯುವಕರು ಗುಂಪು ‘ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ’ ಎಂದು ಹೆಸರಿಟ್ಟುಕೊಂಡು ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ರಾತ್ರಿ ವೇಳೆ ಶೃಂಗೇರಿ ಪಟ್ಟಣ ಹಾಗೂ ಸುತ್ತಲಿನ ಹಳ್ಳಿಗಳ್ಳಲ್ಲಿ ತಮಟೆ ಬಾರಿಸುತ್ತಾ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದೆ.

BIG BREAKING NEWS: ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

ತಿರುಚಿದ ಇತಿಹಾಸ ಸರಿಪಡಿಸುವ ಕೆಲಸವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

Share.
Exit mobile version