ಚಿಕ್ಕಮಗಳೂರು : ಶೃಂಗೇರಿಯಲ್ಲಿ 100 ಬೆಡ್ ಆಸ್ಪತ್ರೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕಳೆದ ಎರಡು ವರ್ಷಗಳಿಂದ ಶೃಂಗೇರಿ ಉತ್ಸಾಹಿ ಯುವಕರ ತಂಡವೊಂದು ನಿರಂತರ ಹೋರಾಟ ಮಾಡುತ್ತಿದ್ದು, ಇದೀಗ ನೂರು ಬೆಡ್ ಆಸ್ಪತ್ರೆ ಹೋರಾಟಕ್ಕೆ ಐತಿಹಾಸಿಕ ಜಯ ಸಿಕ್ಕಂತಾಗಿದೆ.
ಹೌದು, ತಾತ್ಕಾಲಿಕ ಕಟ್ಟಡದಲ್ಲಿ ನೂರು ಬೆಡ್ ಆಸ್ಪತ್ರೆಗೆ ಚಾಲನೆ ನೀಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕೊಪ್ಪಕ್ಕೆ ನಿನ್ನೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲು ಸಮಯಾವಕಾಶಬೇಕಾದ ಕಾರಣ ತಾತ್ಕಾಲಿಕವಾಗಿ ಹಳೆಯ ಕಟ್ಟಡದಲ್ಲಿ ಪ್ರಾರಂಭ ಮಾಡಲು ಆದೇಶಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತಕ್ಷಣವೇ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಶೃಂಗೇರಿಯಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗಿತ್ತು, ನಿನ್ನೆ ಧರಣಿ ಸತ್ಯಾಗ್ರಹಕ್ಕೆ ಮಣಿದು ಧರಣಿ ನಿರತರನ್ನು ಮಾತುಕತೆಗೆ ಕರೆದು ಸರ್ವರ ಸಮ್ಮುಖದಲ್ಲಿ ಸಿಎಂ ಆದೇಶಿಸಿದ್ದಾರೆ. ಈ ಮೂಲಕ ನೂರು ಬೆಡ್ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಬರೀ ಆಶ್ವಾಸನೆ
ಶೀಘ್ರದಲ್ಲೇ ಆಸ್ಪತ್ರೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷ ಕಳೆದರೂ ಕೂಡ ಆಸ್ಪತ್ರೆ ನಿರ್ಮಿಸುವ ಕೆಲಸ ಕೈಗೆತ್ತಿಕೊಂಡಿಲ್ಲ.ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದ ಶೃಂಗೇರಿ ಯುವಕರ ತಂಡ ಪಟ್ಟಣದ ಬೀದಿ ಬೀದಿಯಲ್ಲಿ ತಮಟೆ ಬಾರಿಸುವ ಮೂಲಕ ಸರ್ಕಾರದ ಗಮನ ಸೆಳೆದಿತ್ತು. 100 ಬೆಡ್ ಆಸ್ಪತ್ರೆ ನಿರ್ಮಿಸುವಂತೆ ಒತ್ತಾಯಿಸಿ ಭಿತ್ತಿಪತ್ರ ಪ್ರದರ್ಶನ ಮಾಡುವ ಮೂಲಕ ಸರ್ಕಾರದ ವಿರುದ್ಧ ಯುವಕರ ತಂಡ ಪ್ರತಿಭಟನೆ ನಡೆಸುತ್ತಿದೆ. ಧಾರ್ಮಿಕ ಕ್ಷೇತ್ರ. ಶೃಂಗೇರಿಗೆ ಪ್ರತಿನಿತ್ಯ ಸಾವಿರಾರು ವಾಹನಗಳು ಬಂದು ಹೋಗುತ್ತದೆ.
ನಿತ್ಯ ಸಾವಿರಾರು ವಾಹನಗಳು ಇಲ್ಲಿಗೆ ಬಂದು ಹೋಗುತ್ತವೆ. ಇಲ್ಲಿ ಸಣ್ಣ ಸಮಸ್ಯೆಗೂ ಶಿವಮೊಗ್ಗ, ಉಡುಪಿ ಅಥವಾ ಮಂಗಳೂರಿಗೆ ಹೋಗಬೇಕು. ಇಲ್ಲಿ ಏನಾದರೂ ಅಪಘಾತಗಳು ನಡೆದ್ರೆ ದೂರದ ಮಣಿಪಾಲ್, ಮಂಗಳೂರು ಆಸ್ಪತ್ರೆಗಳಿಗೆ ಹೋಗಬೇಕು ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿ್ತು. . ಸಿಎಂ ಬೊಮ್ಮಾಯಿ ಕೂಡ ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೂ, ಎಲ್ಲರ ಮಾತುಗಳು ಭರವಸೆಯಾಗಿಯೇ ಉಳಿದುಕೊಂಡಿದೆ. ಇನ್ನಾದರೂ ಸರ್ಕಾರ ಆಸ್ಪತ್ರೆ ನಿರ್ಮಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ಹೋರಾಟ ಸಮಿತಿ ಜೊತೆಗೆ ಸಿಎಂ ಮಾತುಕತೆ ನಡೆಸಿದ್ದು ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಒಪ್ಪಿದ್ದಾರೆ.
BIG NEWS: ‘ವಾಂಟೆಂಡ್ ಕ್ರಿಮಿನಲ್’ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್: ‘BJP ಕಚೇರಿ’ ಈಗ ರೌಡಿಗಳ ಅಡ್ಡೆ – ಕಾಂಗ್ರೆಸ್
ಮುರುಘಾ ಶ್ರೀ ವಿರುದ್ಧ ಪೋಸ್ಕೋ ಕೇಸ್: 3 ಕೋಟಿ ಆಮಿಷ ಆರೋಪ ಮಾಡಿದ ಒಡನಾಡಿ ಸಂಸ್ಥೆ ನಿರ್ದೇಶಕರಿಗೆ ನೋಟಿಸ್