ಶಿವಮೊಗ್ಗ: ಗೋವುಗಳ ರಕ್ಷಣೆಗೆ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.
ಮಹಿಳೆಯರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸ್ತ್ರೀ ಸಾಮರ್ಥ್ಯ’ ಯೋಜನೆ ಜಾರಿಗೆ
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳು ಜಾರಿ ಮಾಡಲಾಗಿದೆ. ಗೋಮಾತೆ ಕಸಾಯಿಖಾನೆಗೆ ಹೋಗಬಾರದೆಂಬ ಉದ್ದೇಶದಿಂದ ಪುಣ್ಯದತ್ತು ಯೋಜನೆ ಜಾರಿಯಾಗಿದೆ.
ಮಹಿಳೆಯರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸ್ತ್ರೀ ಸಾಮರ್ಥ್ಯ’ ಯೋಜನೆ ಜಾರಿಗೆ
ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿಸೆಂಬರ್ ತಿಂಗಳೊಳಗೆ 30 ಗೋಶಾಲೆ ಆರಂಭಿಸುವುದಾಗಿ ಪ್ರಭು ಚೌಹಾಣ್ ತಿಳಿಸಿದರು.
ಮಹಿಳೆಯರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸ್ತ್ರೀ ಸಾಮರ್ಥ್ಯ’ ಯೋಜನೆ ಜಾರಿಗೆ
ಚರ್ಮಗಂಟು ರೋಗ ಲಸಿಕೆಗೆ ಸರ್ಕಾರದಿಂದ 13 ಕೋಟಿ ಬಿಡುಗಡೆ
ರಾಜ್ಯದಲ್ಲಿ ಗೋವುಗಳ ರಕ್ಷಣೆಗೆ ಸಹಾಯವಾಣಿ ಆರಂಭಿಸಲಾಗಿದೆ. ಬೆಂಗಳೂರು, ಬೆಳಗಾವಿ ವಿಭಾಗದಲ್ಲಿ ಈಗಾಗಲೇ ಚಾಲನೆ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಸಹಾಯವಾಣಿ, ಆ್ಯಂಬುಲೆನ್ಸ್ ವ್ಯವಸ್ಥೆ ಮತ್ತು ಜಾನುವಾರು ಚರ್ಮಗಂಟು ರೋಗ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗಿದೆ. ಲಸಿಕೆಗಾಗಿ ಸರ್ಕಾರದಿಂದ 13 ಕೋಟಿ ಬಿಡುಗಡೆ ಆಗಿದೆ. ಚರ್ಮಗಂಟು ರೋಗದಿಂದ ಶೇ. 50ರಷ್ಟು ಗೋವುಗಳು ಗುಣಮುಖವಾಗಿವೆ. ರಾಜ್ಯದಲ್ಲಿ 400 ಪಶು ವೈದ್ಯರ ನೇಮಕಾತಿಗೆ ಆದೇಶ ನೀಡಲಾಗಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದರು.
ಮಹಿಳೆಯರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸ್ತ್ರೀ ಸಾಮರ್ಥ್ಯ’ ಯೋಜನೆ ಜಾರಿಗೆ