ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಎರಡಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುವ ಪ್ರದೇಶವನ್ನು ಡೆಂಗ್ಯೂ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತದೆ.
ಬೆಂಗಳೂರು ನಗರದಲ್ಲಿ ಡೆಂಗಿ ಪ್ರಕರಣಗಳನ್ನು ಮತ್ತಷ್ಟು ನಿಯಂತ್ರಿಸಲು ಈಗ ನೂತನ ಕ್ರಮವನ್ನು ಕೈಗೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ 100ಮೀಟರ್ ವ್ಯಾಪ್ತಿಯಲ್ಲಿ ಎರಡಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ, ಆ ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತದೆ. ಹಾಟ್ ಸ್ಪಾಟ್ ಆಗಿ ಗುರುತಿಸಿಕೊಂಡಿರುವ ಪ್ರದೇಶಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಜ್ವರ ಪರೀಕ್ಷೆ ನಡೆಸಲಾಗುತ್ತದೆ. ಇನ್ನು ಡೆಂಗಿ ನಿಯಂತ್ರಣದಲ್ಲಿ ಸ್ವಚ್ಛತೆ, ಸೊಳ್ಳೆ ನಿವಾರಕಗಳ ಮಹತ್ವದ ಕುರಿತು ಜಾಗೃತಿ ಮೂಡಿಸಿ ಭಿತ್ತಿಪತ್ರವನ್ನು ವಿತರಿಸಲಾಗುತ್ತದೆ.