Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

EPFO ಗ್ರಾಹಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್‌ನಲ್ಲೇ ಸಿಗಲಿದೆ ಪಿಎಫ್ ಬ್ಯಾಲೆನ್ಸ್, ಕ್ಲೈಮ್ ಸ್ಟೇಟಸ್ ಮಾಹಿತಿ! PF on WhatsApp soon

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತೆ ಪಾರ್ಕ್ ಸ್ಥಾಪನೆಗೆ ತೈವಾನಿನ ಅಲಿಜನ್ಸ್ ಗ್ರೂಪ್‌ನಿಂದ 1,000 ಕೋಟಿ ಹೂಡಿಕೆ
KARNATAKA

ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತೆ ಪಾರ್ಕ್ ಸ್ಥಾಪನೆಗೆ ತೈವಾನಿನ ಅಲಿಜನ್ಸ್ ಗ್ರೂಪ್‌ನಿಂದ 1,000 ಕೋಟಿ ಹೂಡಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತಾ ಪಾರ್ಕ್‌ (ಐಟಿಐಪಿ) ಸ್ಥಾಪಿಸಲು ತೈವಾನ್‌ನ ಅಲಿಜನ್ಸ್‌ ಇಂಟರ್‌ನ್ಯಾಷನಲ್ ಕಂಪನಿ ಲಿಮಿಟೆಡ್‌, ರಾಜ್ಯ ಸರ್ಕಾರದ ಜೊತೆಗೆ ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಇಂದು ಇಲ್ಲಿ ಸಹಿ ಹಾಕಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಎಲೆಕ್ಟ್ರಾನಿಕ್ಸ್, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಕಾರ್ಯದರ್ಶಿ ಡಾ. ಮಂಜುಳಾ ಎನ್. ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಎಲೆಕ್ಟ್ರಾನಿಕ್ಸ್‌, ಐಟಿ, ಬಿಟಿ ಮತ್ತು ಎಸ್‌ಆಂಡ್‌ಟಿ ಇಲಾಖೆಯ ನಿರ್ದೇಶಕ ರಾಹುಲ್‌ ಎಸ್‌. ಸಂಕನೂರ ಹಾಗೂ ಅಲಿಜನ್ಸ್‌ ಗ್ರೂಪ್‌ನ ಉಪಾಧ್ಯಕ್ಷ ಲಾರೆನ್ಸ್‌ ಚೆನ್‌ ಅವರು ತಿಳಿವಳಿಕೆ ಒಪ್ಪಂದ ಪತ್ರಕ್ಕೆ (ಎಂಒಯು) ಸಹಿ ಹಾಕಿದರು.

ಈ ಯೋಜನೆಯನ್ನು ಅಲಿಜನ್ಸ್‌ ಗ್ರೂಪ್ (Allegiance Group) ಸುಮಾರು ₹ 1,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ ಕಾರ್ಯಗತಗೊಳಿಸಲಿದೆ. 5 ವರ್ಷಗಳ ಅವಧಿಯಲ್ಲಿ ʼಐಟಿಐಪಿʼಯಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳ ಮೂಲಕ ಸುಮಾರು 800 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಎಲೆಕ್ಟ್ರಾನಿಕ್ಸ್‌, ಐಟಿ, ಬಿಟಿ ಮತ್ತು ಎಸ್‌ಆಂಡ್‌ಟಿ ಇಲಾಖೆಯು ತಿಳಿಸಿದೆ.

ʼಐಟಿಐಪಿʼಯು ತೈವಾನಿನ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್‌ ಕಂಪನಿಗಳಿಗೆ ಮೀಸಲಾದ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಅತ್ಯಾಧುನಿಕ ತಯಾರಿಕೆ, ಸಂಶೋಧನೆ ಹಾಗೂ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಉತ್ತೇಜನ ನೀಡಲಿದೆ. ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್‌ ಮತ್ತು ತಯಾರಿಕಾ (ಇಎಸ್‌ಡಿಎಂ) ವಲಯದಲ್ಲಿ ಭಾರತದ ಪ್ರಮುಖ ತಾಣವಾಗಿ ಕರ್ನಾಟಕದ ಸ್ಥಾನವನ್ನು ಈ ಒಪ್ಪಂದವು ಬಲಪಡಿಸಲಿದೆ. ರಾಜ್ಯದಲ್ಲಿ ಸೆಮಿಕಂಡಕ್ಟರ್‌ ವಲಯದ ಬೆಳವಣಿಗೆಗೂ ವೇಗ ದೊರೆಯಲಿದೆ.

ಒಪ್ಪಂದದ ಮುಖ್ಯಾಂಶಗಳು:

• ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ವಲಯಗಳಲ್ಲಿ ತೈವಾನ್‌ ಕಂಪನಿಗಳಿಗೆ ನೆಲೆಯಾಗಲು ವಿಶ್ವ ದರ್ಜೆಯ ಕೈಗಾರಿಕಾ ಪಾರ್ಕ್‌ ಸ್ಥಾಪನೆ
• ಬಿಡಿಭಾಗ, ಪಿಸಿಬಿ ಮತ್ತು ಚಿಪ್ ಡಿಸೈನ್‌ಗೆ ಸದೃಢ ಪೂರೈಕೆ ಸರಪಳಿ ವ್ಯವಸ್ಥೆಯ ಅಭಿವೃದ್ಧಿ
• ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ ಗರಿಷ್ಠ ಮೌಲ್ಯದ ಉದ್ಯೋಗಗಳ ಸೃಷ್ಟಿ ಮತ್ತು ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳು
• ಎಲೆಕ್ಟ್ರಾನಿಕ್ಸ್ ತಯಾರಿಕೆಯಲ್ಲಿ ಭಾರತದ ಸ್ಪರ್ಧಾತ್ಮಕತೆ ಹೆಚ್ಚಿಸಲು ತಂತ್ರಜ್ಞಾನ ವರ್ಗಾವಣೆ ಮತ್ತು ಜಾಗತಿಕ ಅತ್ಯುತ್ತಮ ಕಾರ್ಯನಿರ್ವಹಣೆಗೆ ಉತ್ತೇಜನ

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ನಾವೀನ್ಯತೆಗಾಗಿ ಜಾಗತಿಕ ಕೇಂದ್ರವಾಗುವ ಕರ್ನಾಟಕದ ದೂರದೃಷ್ಟಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಪಾಲುದಾರಿಕೆ ಮಹತ್ವದ ಹೆಜ್ಜೆಯಾಗಿದೆ. ʼಐಟಿಐಪಿʼ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಹೂಡಿಕೆಗಳನ್ನು ಆಕರ್ಷಿಸಲಿದೆ. ಯುವ ಜನರಿಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. ಜಾಗತಿಕ ಮೌಲ್ಯ ಸರಪಳಿಯಲ್ಲಿ ಭಾರತದ ಸ್ಥಾನವನ್ನು ಬಲಪಡಿಸಲಿದೆ” ಎಂದು ಹೇಳಿದರು.

, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಎಲೆಕ್ಟ್ರಾನಿಕ್ಸ್, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, “ಕರ್ನಾಟಕವು ಭಾರತದ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದ್ದು, ನಾವೀನ್ಯತೆ, ಡೀಪ್-ಟೆಕ್ ಪ್ರತಿಭೆ ಮತ್ತು ಸೆಮಿಕಂಡಕ್ಟರ್ ಡಿಸೈನ್‌ ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ. ಈ ಪಾಲುದಾರಿಕೆಯು ಸದೃಢವಾದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ವ್ಯವಸ್ಥೆ ಅಭಿವೃದ್ಧಿಪಡಿಸುವ ನಮ್ಮ ಪ್ರಯತ್ನಗಳಿಗೆ ವೇಗ ನೀಡಲಿದೆ. ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಲು ನಾವು ಬದ್ಧರಾಗಿದ್ದೇವೆ. ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವು ಆದ್ಯತೆಯ ತಾಣವಾಗಿರುವಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದೇವೆʼ ಎಂದರು.

ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ಆ್ಯಂಡ್‌ಟಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್, ಅವರು ಪ್ರತಿಕ್ರಿಯಿಸಿ, “ಈ ಒಪ್ಪಂದವು ಜಾಗತಿಕ ಪಾಲುದಾರಿಕೆಗಳನ್ನು ಬೆಳೆಸುವ ಮತ್ತು ಭವಿಷ್ಯಕ್ಕೆ ಸನ್ನದ್ಧ ಸ್ಥಿತಿಯಲ್ಲಿರುವ ಕೈಗಾರಿಕಾ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸುವ ಕರ್ನಾಟಕದ ಪೂರ್ವಭಾವಿ ಧೋರಣೆಯನ್ನು ಪ್ರತಿಬಿಂಬಿಸುತ್ತದೆʼ ಎಂದರು.

ತೈವಾನ್‌ನ ಅಲಿಜನ್ಸ್‌ ಗ್ರೂಪ್‌ನ ಉಪಾಧ್ಯಕ್ಷ ಲಾರೆನ್ಸ್ ಚೆನ್ ಅವರು ಪ್ರತಿಕ್ರಿಯಿಸಿ, “ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವುದಕ್ಕೆ ವಿಶ್ವದಾದ್ಯಂತ ಮನ್ನಣೆಗೆ ಪಾತ್ರವಾಗಿರುವ ಕರ್ನಾಟಕದ ಜೊತೆಗೆ ಪಾಲುದಾರಿಕೆ ಹೊಂದಲು ನಾವು ಉತ್ಸುಕರಾಗಿದ್ದೇವೆ. ತೈವಾನ್ ಕಂಪನಿಗಳು ಭಾರತದಲ್ಲಿ ತಮ್ಮ ವಹಿವಾಟು ವಿಸ್ತರಿಸಲು ಮತ್ತು ಸೆಮಿಕಂಡಕ್ಟರ್ ಹಾಗೂ ಎಲೆಕ್ಟ್ರಾನಿಕ್ಸ್ ವ್ಯವಸ್ಥೆಯ ಬೆಳವಣಿಗೆಗೆ ಕೊಡುಗೆ ನೀಡಲು ʼಐಟಿಐಪಿʼ ವೇಗವರ್ಧಕವಾಗಿ ಕಾರ್ಯನಿರ್ವಹಿಸಲಿದೆ” ಎಂದು ಅಭಿಪ್ರಾಯಪಟ್ಟರು.

ಈ ಒಪ್ಪಂದಕ್ಕೆ ಸಹಿ ಹಾಕಿರುವುದು ʼಭಾರತದಲ್ಲಿಯೇ ತಯಾರಿಸಿ, ಸ್ವಾವಲಂಬನೆಯ ಭಾರತ ಮತ್ತು ಇಂಡಿಯಾ ಸೆಮಿಕಂಡಕ್ಟರ್ ಮಿಷನ್‌ಗೆ ಕರ್ನಾಟಕದ ಬದ್ಧತೆಗೆ ನಿದರ್ಶನವಾಗಿದೆ. ಇದು ಸುಸ್ಥಿರ ಬೆಳವಣಿಗೆ ಮತ್ತು ಜಾಗತಿಕ ಪಾಲುದಾರಿಕೆಗೂ ಹಾದಿ ಮಾಡಿಕೊಡಲಿದೆ.

Share. Facebook Twitter LinkedIn WhatsApp Email

Related Posts

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

1 Min Read

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

2 Mins Read

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

2 Mins Read
Recent News

EPFO ಗ್ರಾಹಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್‌ನಲ್ಲೇ ಸಿಗಲಿದೆ ಪಿಎಫ್ ಬ್ಯಾಲೆನ್ಸ್, ಕ್ಲೈಮ್ ಸ್ಟೇಟಸ್ ಮಾಹಿತಿ! PF on WhatsApp soon

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

State News
KARNATAKA

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ…

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.