ಬೆಂಗಳೂರು: ಕಂದಾಯ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ಹೊಸದಾಗಿ ನೇಮಕಾತಿ ಹೊಂದಿರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಿಲ್ಲಾ ಹಂತದಲ್ಲೇ ತರಬೇತಿ ನೀಡಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಪೈಕಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ನೇಮಕಾತಿ ಅಧಿಸೂಚನೆ ಹೊರಡಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ 1000 ಗ್ರಾಮ ಆಡಳಿತ ಅಧಿಕಾರಿಗಳ ಅರ್ಹತಾ ಪಟ್ಟಿಯನ್ನು ಪಡೆದು, ತದನಂತರ ಜಿಲ್ಲಾಧಿಕಾರಿಗಳ ಹಂತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಅವಹಾಲಿಸಿದ ತರುವಾಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದ ಎಂದು ತಿಳಿಸಿದ್ದಾರೆ.
ಹೀಗೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆ ಹೊಂದಿ, ಮೂಲ ದಾಖಲಾತಿ, ಸಿಂಧುತ್ವ, ಪೊಲೀಸ್ ಇಲಾಖೆಯ ನಿರಾಕ್ಷೇಪಣಾ ವರದಿ ಹಾಗೂ ಮುಂತಾದ ವರದಿಗಳು ಸ್ವೀಕೃತಗೊಂಡಿರುವ ಅಭ್ಯರ್ಥಿಗಳಿಗೆ ದಿನಾಂಕ:29.04.2025ರಂದು ಮಾನ್ಯ ಮುಖ್ಯಮಂತ್ರಿಯವರು ನೇಮಕಾತಿ ಪತ್ರವನ್ನು ವಿತರಿಸಿರುತ್ತಾರೆ, ಹೀಗೆ ನೇಮಕಾತಿ ಪಡೆದ ಗ್ರಾಮ ಆಡಳಿತ ಅಧಿಕಾರಿರವರುಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಮೇಲೆ ಓದಲಾದ ಸರ್ಕಾರದ ಪತ್ರದಲ್ಲಿ ತರಬೇತಿ ವಿಷಯ ಮತ್ತು ವೇಳಾಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರಂತೆ ಈ ಕೆಳಕಂಡಂತೆ ಆದೇಶಿಸಿದೆ ಎಂದಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಹೊಸದಾಗಿ ನೇಮಕಾತಿ ಹೊಂದಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಅನುಬಂಧದಲ್ಲಿ ತಿಳಿಸಿರುವ ವೇಳಾಪಟ್ಟಿಯಂತೆ ಜಿಲ್ಲಾ ಹಂತದಲ್ಲಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲು ಸರ್ಕಾರದ ಮಂಜೂರಾತಿ ನೀಡಿ ಆದೇಶಿಸಿದೆ.
ಜಿಲ್ಲಾ ಹಂತದ ತರಬೇತಿಯ ಪುಗತಿಯನ್ನು ಕಾಲಕಾಲಕ್ಕೆ ಪರಿಶೀಲನೆ ನಡೆಸಿ, ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಕೈಗೊಳ್ಳಲು ಪ್ರತಿ ಜಿಲ್ಲೆಯಲ್ಲಿ ಒಬ್ಬ ನೋಡಲ್ ಅಧಿಕಾರಿರವರನ್ನು ನೇಮಿಸತಕ್ಕದ್ದು ಎಂದಿದ್ದಾರೆ.
BREAKING: ಮೇ.9ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ