ಬೆಂಗಳೂರು: ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ… pic.twitter.com/K2BMGEm0MC
— DIPR Karnataka (@KarnatakaVarthe) October 19, 2024
ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ.
ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು ಸ್ಥಳೀಯ ಪಠ್ಯಕ್ರಮ, ಭಾಷೆ, ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಕರನ್ನು ಸಶಕ್ತಗೊಳಿಸಿ ತಯಾರಿಸುತ್ತದೆ.
ಈ ಕಾರ್ಯಕ್ರಮವು ಕರ್ನಾಟಕದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ ಸುಮಾರು 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ತರಬೇತಿ ನೀಡಲಾಗುವುದು.
ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೋಗಳು ಮತ್ತು ಬೋಧನಾ ಸಂಪನ್ಮೂಲಗಳನ್ನು ರಚಿಸಲು “ಶಿಕ್ಷಣ ಕೋಪೈಲಟ್” ಸಹಾಯ ಮಾಡುತ್ತದೆ.
BREAKING: ನ.1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ