ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದಂತ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ.
ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು 10 ಸಾವಿರ್ಕಕೂ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಿದ್ದಾರೆ. 20 ಸಾವಿರಕ್ಕೂ ಹೆಚ್ಚು ಮಂದಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಲಾಗಿದೆ ಎಂದಿದೆ.
ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿಲಾಗಿದೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿರೋದಾಗಿ ತಿಳಿಸಿದೆ.
Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’
BREAKING : ಚೆನ್ನೈನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ; ಆತಂಕದಿಂದ ಮಕ್ಕಳನ್ನ ಮನೆಗೆ ಕರೆದೊಯ್ತಿರುವ ಪೋಷಕರು