ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದ ಬಳಿಯಲ್ಲಿ ನಡೆಸುತ್ತಿರುವಂತ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಈವರೆಗೆ 10,174 ಅರ್ಜಿಗಳು ಸಲ್ಲಿಕೆಯಾಗಿರೋದಾಗಿ ತಿಳಿದು ಬಂದಿದೆ.
ಬೆಂಗಳೂರಿನ ವಿಧಾನಸೌಧದ ಬಳಿಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ನಡೆಸುತ್ತಿರುವಂತ ಜನಸ್ಪಂದನ ಕಾರ್ಯಕ್ರಮದಲ್ಲಿ ಕ್ಷಣ ಕ್ಷಣಕ್ಕೂ ಜನ ಸಾಗರವೇ ಹರಿದು ಬರುತ್ತಿದೆ. ಮಧ್ಯಾಹ್ನದ ಈ ಸುಡು ಬಿಸಿಲಿನಲ್ಲಿಯೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಊಟದವನ್ನು ಮಾಡದೇ ಜನರ ಅಹವಾಲನ್ನು ಸ್ವೀಕರಿಸುತ್ತಿದ್ದಾರೆ.
ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಇವರು ಬೌದ್ಧ ಜನಾಂಗದ ಅಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ 20 ಲಕ್ಷ ರೂ.ಗಳ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
.ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು 2024-25ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ 100 ಕೋಟಿ ರೂ.ಗಳ ಅನುದಾನವನ್ನು ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಬೆಳಗಾವಿ ಜಿಲ್ಲೆಯ ಸುರೇಶ್ ತುಕಾರಾಂ ಫೋಂಡೆ ತಮ್ಮ ಜಮೀನಿನಲ್ಲಿ ದೀಪಕ್ ಪಾಟೀಲ್ ಎಂಬುವರು ಮಣ್ಣು ತೆಗೆಯುತ್ತಿದ್ದು ಕಳವು ಪ್ರಕರಣ ದಾಖಲಿಸಿಲ್ಲ ಎಂದು ದೂರಿದರು.
ಸ್ಥಳದಲ್ಲಿಯೇ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪ್ರಕರಣ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ದಯಾನಂದ್ ಅವರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸ್ಥಳದಲ್ಲಿಯೇ ಮಾತನಾಡಿ ಕ್ರಮ ವಹಿಸಿಲು ಸೂಚಿಸಿದರು.
ಇನ್ನೂ ಜನಸ್ಪಂದನ ಕಾರ್ಯಕ್ರಮ ಮುಂದುವರೆದಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಕೌಂಟರ್ ನಂಬರ್ 1, 2ರ ಮೂಲಕ ಈವರೆಗೆ 10,174 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ ಎಂಬುದಾಗಿ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದೆ.
BREAKING: ಶಿವಮೊಗ್ಗದ ‘ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ’ ಸ್ಥಾನಕ್ಕೆ ‘ಬಿ.ಆರ್ ಜಯಂತ್’ ರಾಜೀನಾಮೆ
BREAKING NEWS: ‘ಮ್ಯಾನ್ಮಾರ್’ ಜೊತೆಗಿನ ‘ಮುಕ್ತ ಸಂಚಾರ ವ್ಯವಸ್ಥೆ’ಯನ್ನು ರದ್ದುಗೊಳಿಸಿದ ‘ಭಾರತ’