ಬೆಂಗಳೂರು : ಹಿಂದುಳಿದ ವರ್ಗವನ್ನು ಮುಖ್ಯವಾಹಿನಿಗೆ ತರಲು ಶಿಕ್ಷಣವೇ ಅಸ್ತ್ರ. ಬಸವರಾಜ ಬೊಮ್ಮಾಯಿ ಸರ್ಕಾರ ಈ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಯನ್ನು ನೀಡುತ್ತಿದೆ. ಈವರೆಗೆ ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
ಹಿಂದುಳಿದ ವರ್ಗಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅವರ ಬದುಕಿನ ಮನ್ವಂತರಕ್ಕೆ ಬಿಜೆಪಿ ಮುಂದಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿಗಳನ್ನು ಹೆಚ್ಚಿಸಲು ಸರ್ಕಾರ ಹೆಚ್ಚುವರಿ 107 ಕೋಟಿ ರೂ. & ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡಲು 150 ಕೋಟಿ ರೂ. ಬಿಡುಗಡೆ ಮಾಡಿದೆ ಎಂದಿದೆ.
ಹಿಂದುಳಿದ ವರ್ಗದವರ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ಸರ್ಕಾರ ಗಂಗಾ ಕಲ್ಯಾಣ ಯೋಜನೆ ರೂಪಿಸಿದೆ. ಕೊಳವೆ ಬಾವಿಗಳನ್ನು ಕೊರೆಸಲು 115 ಕೋಟಿ ರೂ. ಅನುದಾನ ನೀಡಲು ಮುಂದಾಗಿದೆ.ನಾರಾಯಣ ಗುರುಗಳ ಸ್ಮರಣಾರ್ಥ ಸರ್ಕಾರ ವಸತಿ ಶಾಲೆಯನ್ನು ಆರಂಭಿಸಲು ಮುಂದಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವ ಮೂಲಕ ಹಿಂದುಳಿದ ವರ್ಗದ ಕನಸನ್ನು ನನಸು ಮಾಡಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಹಿಂದುಳಿದ ವರ್ಗಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅವರ ಬದುಕಿನ ಮನ್ವಂತರಕ್ಕೆ ಬಿಜೆಪಿ ಮುಂದಾಗಿದೆ. ವಿದ್ಯಾರ್ಥಿ ನಿಲಯಗಳಲ್ಲಿ ವಸತಿಗಳನ್ನು ಹೆಚ್ಚಿಸಲು @BSBommai ಸರ್ಕಾರ ಹೆಚ್ಚುವರಿ 107 ಕೋಟಿ ರೂ. & ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ನೀಡಲು 150 ಕೋಟಿ ರೂ. ಬಿಡುಗಡೆ ಮಾಡಿದೆ. #OBCwithBJPKar pic.twitter.com/JUThSyLDpL
— BJP Karnataka (@BJP4Karnataka) October 30, 2022
‘ಹೆಣ್ಣು–ಯುವ ಸಮೂಹದಿಂದ ಮಾತ್ರ ದೇಶದಲ್ಲಿ ಬದಲಾವಣೆ ತರಲು ಸಾಧ್ಯ’ : ಡಿ.ಕೆ ಶಿವಕುಮಾರ್ |D.K Shivakumar