ಬೆಂಗಳೂರು : ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ 108 ಆಂಬುಲೆನ್ಸ್ ಚಾಲಕರು ಮುಷ್ಕರ ನಡೆಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಮಾತನಾಡಿ, ಲೋಕಸಭೆ ಚುನಾವಣೆ ಇರುವುದರಿಂದ ಪುಷ್ಕರವನ್ನು ಕೈಬಿಡಿ ಎಂದು ಚಾಲಕರಲ್ಲಿ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಮುಷ್ಕರ ಕುರಿತು ಮಾತನಾಡಿದ ಅವರು, ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ. 108 ಆಂಬುಲೆನ್ಸ್ ಚಾಲಕರಿಗೆ ಪೂರ್ತಿ ಹಣ ನೀಡಿದ್ದೇವೆ. ವೇತನ ನೀಡುವಲ್ಲಿ ಸಣ್ಣ ಸಮಸ್ಯೆಯಾಗಿತ್ತು. ಆದರೆ ಸಂಬಳ ಕೊರತೆ ಮಾಡಿಲ್ಲ ಎಂದು ಅವರು ತಿಳಿಸಿದರು.

ಇದು ಚುನಾವಣೆ ಸಮಯ ಬದಲಾವಣೆ ಮಾಡುವುದಕ್ಕೆ ಆಗುವುದಿಲ್ಲ. ಅಶೋಕ್ ಅವರೇ ನಿಮ್ಮ ಸರ್ಕಾರದ ಅವಧಿಯಲ್ಲಿ ಲೋಪವಾಗಿತ್ತು. ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸಿಬ್ಬಂದಿ ಮುಷ್ಕರ ಕೈ ಬಿಡಿ ಎಂದು 108 ಆಂಬುಲೆನ್ಸ್ ಚಾಲಕರಿಗೆ ಮನವಿ ಮಾಡಿದರು.

ಒಂದು ವೇಳೆ ಕೈ ಬಿಡದಿದ್ದರೆ ನಾವು ಪರ್ಯಾಯ ಕ್ರಮಕ್ಕೆ ಮುಂದಾಗುತ್ತೇವೆ 108 ಜನರಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು ನಮ್ಮ ಬಳಿ ಬೇರೆ ಚಾಲಕರಿದ್ದಾರೆ ಅವರನ್ನು ಸೇವೆಗೆ ಬಳಸಿಕೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Share.
Exit mobile version