ಬೆಂಗಳೂರು: ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ( 108 Ambulance ) ತಾಂತ್ರಿಕ ಸಮಸ್ಯೆ ( Technical Problem ) ಸರಿಪಡಿಸಲಾಗಿದೆ. ಈಗ ಸಹಾಯವಾಣಿ ಸಂಖ್ಯೆ ಆರಂಭಗೊಂಡಿದ್ದು, ಸಮಸ್ಯೆ ನಿವಾರಿಸಲಾಗಿದೆ. ಸಾರ್ವಜನಿಕರು ತುರ್ತು ಸಂದರ್ಭದಲ್ಲಿ 108 ಸಹಾಯವಾಣಿ ಸಂಖ್ಯೆಗೆ ( Helpline Number ) ಕರೆ ಮಾಡಬಹುದಾಗಿ ಎಂಬುದಾಗಿ ರಾಜ್ಯ ಆರೋಗ್ಯ ಇಲಾಖೆ ( Karnataka Health Department ) ಮಾಹಿತಿ ನೀಡಿದೆ.
ಈ ಕುರಿತಂತೆ ಟ್ಟಿಟ್ಟರ್ ನಲ್ಲಿ ( Twitter ) ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ 108 ಆಂಬುಲೆನ್ಸ ಕರೆ ಸ್ವೀಕಾರ ವ್ಯವಸ್ಥೆಯಲ್ಲಿ, ತಾಂತ್ರಿಕ ತೊಂದರೆಯಿಂದಾಗಿ, ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿ ಪಡಿಸಲಾಗಿದ್ದು ಕರೆ ಸ್ವೀಕಾರ ಸೇವೆ ಪುನರಾರಂಭ ಗೊಂಡಿದೆ. ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಸಂಪರ್ಕಿಸಿ ಎಂದಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ 108 ಆಂಬುಲೆನ್ಸ ಕರೆ ಸ್ವೀಕಾರ ವ್ಯವಸ್ಥೆಯಲ್ಲಿ, ತಾಂತ್ರಿಕ ತೊಂದರೆಯಿಂದಾಗಿ, ವ್ಯತ್ಯಯ ಉಂಟಾಗಿತ್ತು.
ಈಗ ಅದನ್ನು ಸರಿ ಪಡಿಸಲಾಗಿದ್ದು ಕರೆ ಸ್ವೀಕಾರ ಸೇವೆ ಪುನರಾರಂಭ ಗೊಂಡಿದೆ.
ಆದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಸಂಪರ್ಕ ಸಾಧಿಸಲು…1/2
— Commissioner, Health, GoK (@Comm_dhfwka) September 25, 2022
ಇನ್ನೂ 108 ತುರ್ತು ಆ್ಯಂಬುಲೆನ್ಸ್ ಸಹಾಯವಾಣಿ ಸಂಖ್ಯೆಯಲ್ಲದೇ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲಾ ಜಿಲ್ಲೆಯ DHO ಗಳು ಹೆಚ್ಚುವರಿ ದೂರವಾಣಿ ಸಂಖ್ಯೆಗಳನ್ನು ಅಯಾ ಜಿಲ್ಲೆಯ ಜನರಿಗೆ ಒದಗಿಸುತ್ತಿದ್ದಾರೆ ಎಂಬುದಾಗಿ ಹೇಳಿದೆ.
ಅನುಕೂಲವಾಗುವಂತೆ ಎಲ್ಲಾ ಜಿಲ್ಲೆಯ DHO ಗಳು ಹೆಚ್ಚುವರಿ ದೂರವಾಣಿ ಸಂಖ್ಯೆಗಳನ್ನು ಅಯಾ ಜಿಲ್ಲೆಯ ಜನರಿಗೆ ಒದಗಿಸುತ್ತಿದ್ದಾರೆ.@CMofKarnataka @mla_sudhakar @DHFWKA @KarnatakaVarthe
2/2— Commissioner, Health, GoK (@Comm_dhfwka) September 25, 2022