ಚಿಕ್ಕಬಳ್ಳಾಪುರ: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸೇವೆಯನ್ನು ನಿರ್ವಹಣೆ ಮಾಡಲಾಗುತ್ತದೆ. ಆರೋಗ್ಯ ಇಲಾಖೆಯ ಅಧೀನದಲ್ಲಿ 108 ಅ್ಯಂಬುಲೆನ್ಸ್ ಸೇವೆಯನ್ನು ನಿರ್ವಹಣೆ ಮಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 108 ಆ್ಯಂಬುಲೆನ್ಸ್ ಸೇವೆಯನ್ನು ರಾಜ್ಯ ಸರ್ಕಾರವೇ ನಿರ್ವಹಣೆ ಮಾಡಲಿದೆ. ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆಯ ನಿರ್ವಹಣೆಯನ್ನು ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತದೆ ಎಂದರು.
ಜಿಕೆವಿ ಅಥವಾ ಖಾಸಗಿ ಸಂಸ್ಥೆಗಳಿಗೆ 108 ಆ್ಯಂಬುಲೆನ್ಸ್ ನಿರ್ವಹಣೆಯ ಟೆಂಡರ್ ನೀಡುವುದಿಲ್ಲ. ಬದಲಾಗಿ ಸರ್ಕಾರದಿಂದಲೇ ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈಗಾಗಲೇ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆಯಿಂದಲೇ 108 ಆ್ಯಂಬುಲೆನ್ಸ್ ಸೇವೆ ನಿರ್ವಹಣೆ ಪ್ರಾಯೋಗಿಕ ಕಾರ್ಯ ನಡೆಯುತ್ತಿದೆ. ಜಿಲ್ಲಾ ಕೇಂದ್ರದಲ್ಲೇ ಕಂಟ್ರೋಲ್ ರೂಂ ತೆರೆಯಲಾಗುವುದು ಎಂದರು.
ಫ್ಯಾಷನ್ ಪ್ರತಿಸ್ಪರ್ಧಿ ವೆರ್ಸೇಸ್ ಅನ್ನು ಸುಮಾರು 1.4 ಬಿಲಿಯನ್ ಡಾಲರ್ ಗೆ ಖರೀದಿಸಲಿದೆ ಪ್ರಾಡಾ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ RCB vs DC ಪಂದ್ಯಾವಳಿ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ