ಆಂಧ್ರ ಪ್ರದೇಶ : ನಗರದಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಡೆಸಿದ್ದ ರ್ಯಾಲಿಯಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ. ಈ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ರ್ಯಾಲಿ, ಸಾರ್ವಜನಿಕ ಸಭೆ ನಡೆಸದಂತೆ ನಿಷೇಧಾಜ್ಞೆ ಜಾರಿಗೆ ತಂದಿದೆ.
ಬಗ್ಗೆ ಸುದ್ದಿಗಾರರೊಂದಿಗೆ ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಮಾತನಾಡಿ, ಸಾರ್ವಜನಿಕ ಸಂಚಾರ, ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರು ಅನುವು ಮಾಡಿಕೊಡಬೇಕು . ಅಧಿಕಾರಿಗಳು ರಸ್ತೆಗಳಲ್ಲಿ ಸಭೆಗಳಿಗೆ ಅನುಮತಿ ನೀಡುವುದನ್ನು ತಪ್ಪಿಸಬೇಕು. ಅಪರೂಪದ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಭೆಗಳಿಗೆ ಅನುಮತಿಯನ್ನು ನೀಡಬೇಕು ಎಂದು ತಿಳಿಸಿದರು.