ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿಧಾನಸೌಧದ ಮುಂದೆ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಈ ಕಾರ್ಯಮಕ್ರಮದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದಂತ ಜನರು 11,601 ಅರ್ಜಿಯನ್ನು 4 ಗಂಟೆಯವರೆಗೆ ಸಲ್ಲಿಸಿದ್ದಾರೆ.
ಇಂದಿನ ಎರಡನೇ ಬಾರಿಯ ಸಿಎಂ ಸಿದ್ಧರಾಮಯ್ಯ ಅವರ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಅಲ್ಲದೇ ಅಪಘಾತಕ್ಕೆ ಒಳಗಾದ ಲೋಕೇಶ್ ಪುಟ್ಟನಾಯಕ ಅವರಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 50 ಸಾವಿರ ರೂ.ಗಳ ಪರಿಹಾರವನ್ನು ಜನಸ್ಪಂದನದ ಸ್ಥಳದಲ್ಲಿಯೇ ಘೋಷಿಸಿ ಪರಿಹಾರ ಬಿಡುಗಡೆ ಪತ್ರ ನೀಡಿದ್ದಾರೆ.
ಇದಷ್ಟೇ ಅಲ್ಲದೇಕೋಲಾರ ಜಿಲ್ಲೆಯ ಕೆ.ಜಿ.ಎಫ್ ನ ಎಂಟು ವರ್ಷದ ಎನ್.ಕೃಷ್ಣ ಅವರಿಗೆ 1 ಲಕ್ಷ ರೂ. ಗಳ ಪರಿಹಾರ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನದ ಸ್ಥಳದಲ್ಲಿಯೇ ಘೋಷಿದರು.
ಬೆಂಗಳೂರಿನ ನೂರ್ ಫಾತಿಮಾ ಬಿನ್ ಇಬ್ರಾಹಿಂ ಇವರಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಕಝಾಕಿಸ್ಥಾನದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸಕ್ಕಾಗಿ 10 ಲಕ್ಷ ರೂ.ಗಳ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯ ತಂದೆಗೆ ಹಸ್ತಾಂತರ ಮಾಡಿದರು.
ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರ ಘೋಷೊಸಿದ ಸಿಎಂ
1. ರಾಮನಗರ ಜಿಲ್ಲೆಯ ವಿಜಯಕುಮಾರ್ ಬಿನ್ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.
2. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್ ಬೋನ್ ಮ್ಯಾರೋ ಕಸಿಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.
3. ತುಮಕೂರು ಜಿಲ್ಲೆಯ ೮ ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ ೫೦ ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ನಾಗರಾಜಯ್ಯ ಅವರು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಶಿರಾಸಲ್ಲಿ ರೂಢಿದಾರಿಯನ್ನು ಕತ್ತರಿಸಿರುವುದರಿಂದ 5 ಕಿ.ಮೀ ಬಳಸಿಕೊಂಡು ಓಡಾಡಬೇಕಿದೆ. ಇದನ್ನು ಸರಿಪಡಿಸುವಂತೆ ಕೋರಿದರು. ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಬೆಳಗಾವಿ ಜಿಲ್ಲೆಯ ಸುರೇಶ್ ತುಕಾರಾಂ ಫೋಂಡೆ ತಮ್ಮ ಜಮೀನಿನಲ್ಲಿ ದೀಪಕ್ ಪಾಟೀಲ್ ಎಂಬುವರು ಮಣ್ಣು ತೆಗೆಯುತ್ತಿದ್ದು ಕಳವು ಪ್ರಕರಣ ದಾಖಲಿಸಿಲ್ಲ ಎಂದು ದೂರಿದರು.
ಸ್ಥಳದಲ್ಲಿಯೇ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪ್ರಕರಣ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ದಯಾನಂದ್ ಅವರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸ್ಥಳದಲ್ಲಿಯೇ ಮಾತನಾಡಿ ಕ್ರಮ ವಹಿಸಿಲು ಸೂಚಿಸಿದರು.
‘ಆಧುನಿಕ ಅನುಭವ ಮಂಟಪ’ಕ್ಕೆ ರೂ.50 ಕೋಟಿ ಬಿಡುಗಡೆ – ಸಚಿವ ಈಶ್ವರ ಖಂಡ್ರೆ
Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’