ಬೆಂಗಳೂರು : ಗೃಹ ಬಳಕೆ ಸಿಲೆಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದವರ ವಿರುದ್ಧ ಕ್ರಮ ಕೈಗೊಂಡಿದ್ದು, LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಪ್ರಕರಣ ದಾಖಲಾಗಿವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ವಾಣಿಜ್ಯ ಉದ್ದೇಶಕ್ಕೆ ಬಳಸ್ತಿದ್ದ 1603 ಸಿಲಿಂಡರ್ ವಶಪಡಿಸಿಕೊಳ್ಳಲಾಗಿದೆ. LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಸೌದೆ ಒಲೆ ಬಳಸಿ ಎಂದು ಮನವಿ ಮಾಡಿದ್ದಾರೆ. ಅಡುಗೆ ಅನೀಲ ಅಭಾವದಿಂದ ಹೋಟೆಲ್‌ಗಳು ಬಂದ್ ಆಗ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್ ಗೆ ಕೊಡ್ತಾ ಇದ್ದೀವಿ. ಹಾಸ್ಪಿಟಲ್‌ಗಳಿಗೆ 100% ಕೊಡ್ತಿದ್ದೇವೆ. ನಿನ್ನೆ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರೊಂದಿಗೆ ಸಭೆ ಆಗಿದೆ. ಮಂಗಳವಾದಿಂದ ಇಂಪ್ಲಿಮೆಂಟ್ ಆದ್ರೆ ಹೋಟೆಲ್‌ಗಳಿಗೆ ಇನ್ನೂ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್ ಸಿಲಿಂಡರ್ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿಲಿಂಡರ್ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಕರೆ ನೀಡಿದ್ದಾರೆ. ಸಿಲಿಂಡರ್ ಅಭಾವ ಇರುವುದರಿಂದ ಹಳ್ಳಿ ಭಾಗದ ಜನರು ಸೌದೆ ಒಲೆಗಳನ್ನು ಬಳಸಿ. ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ. ಅರಣ್ಯ ಪ್ರದೇಶದ ಹಸಿ ಮರ ಬಿಟ್ಟು ಒಣ ಕಟ್ಟಿಗೆ ಬಳಸುವಂತೆ ಅವರು ಮನವಿ ಮಾಡಿದ್ದಾರೆ.








